ನವದೆಹಲಿ: ಕಾಂಗ್ರೆಸ್ ಮುಖಂಡ ಡಿ. ಕೆ.ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ನವದೆಹಲಿಯಲ್ಲಿನ ಅವರ ನಿವಾಸದಲ್ಲಿ ದೊರೆತ 8.60 ಕೋಟಿ ರೂಪಾಯಿಗಳಷ್ಟು ನಗದಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊರಡಿಸಿರುವ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಗುರುವಾರ ಹೈಕೋರ್ಟ್ ನಿರಾಕರಿಸಿದೆ.
ಈ ಹಿನ್ನಲೆಯಲ್ಲಿ ಪ್ರಕರಣದ ಆರೋಪಿಗಳಾಗಿರುವ ಡಿಕೆಶಿ ಮತ್ತು ಇತರರು ವಿಚಾರಣೆಗೆ ಹಾಜರಾಗುವುದು ಅನಿವಾರ್ಯವಾಗಿದೆ.
ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ್ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾ.ಅರವಿಂದ ಕುಮಾರ್ ಅವರಿದ್ದ ನ್ಯಾಯಪೀಠ ಇಂದಿನ ತೀರ್ಪುನ್ನು ನೀಡಿದೆ. ಡಿ.ಕೆ.ಶಿವಕುಮಾರ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.
2017ರ ಆಗಸ್ಟ್ 2ರಂದು ದೆಹಲಿಯ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ದಾಖಲೆ ಇಲ್ಲದ 8.59 ಕೋಟಿ ರುಪಾಯಿಯನ್ನು ಪತ್ತೆ ಮಾಡಿತ್ತು. ಅಲ್ಲದೇ, ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು.
ಮನೆಯಲ್ಲಿ ಪತ್ತೆಯಾದ ಹಣದ ಜೊತೆಗೆ ಹವಾಲಾ ಮೂಲಕ ಏಜೆಂಟ್ಗಳ ಸಹಾಯದಿಂದ ಡಿ. ಕೆ. ಶಿವಕುಮಾರ್ ಸಾವಿರಾರು ಕೋಟಿ ರೂಗಳನ್ನು ಬದಲಾಯಿಸಿದ್ದಾರೆ. ಆಪ್ತರ ಮೂಲಕ ಕಪ್ಪು ಹಣವನ್ನು ಬಿಳಿಯಾಗಿ ಪರಿವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಇನ್ನು ವಿದೇಶದಲ್ಲೂ ಡಿಕೆಶಿ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಇದೀಗ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ ಹಿನ್ನಲೆಯಲ್ಲಿ ಇಡಿ ಯಾವ ಕ್ಷಣದಲ್ಲಾದರೂ ಡಿಕೆಶಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಬಹುದಾಗಿದೆ.
ಸಮಾಜದ ಉತ್ತಮ ಸುದ್ದಿಗಳನ್ನು ನಾವು ನಿಮ್ಮ ಮುಂದಿಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಪ್ರೋತ್ಸಾಹಿಸಿ, ಸ್ವೀಕರಿಸಿ. ನೀವು ಸ್ವೀಕರಿಸಿದಾಗ ನಾವು ಬೆಳೆಯಬಹುದು. ಒಳ್ಳೆಯ ಸುದ್ದಿಗಳಿಗೆ ಸಮಾಜ ತೆರೆದುಕೊಂಡಿದೆ ತಲುಪಿಸುವವರು ನಾವಾಗಬಾರದೇಕೆ?
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.