ನವದೆಹಲಿ: ಜಮ್ಮು ಕಾಶ್ಮೀರ, ಲಡಾಖ್ ಭಾಗದ 100 ಮಂದಿಯ ನಿಯೋಗವು ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಆಗಸ್ಟ್ 5 ರಂದು 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ಗೃಹ ಸಚಿವ ಶಾ ಅವರು ನಡೆಸುತ್ತಿರುವ ಮೊದಲ ಸಂವಾದ ಇದಾಗಿದೆ.
ಪುಲ್ವಾಮಾ, ಕಾಶ್ಮೀರ ಕಣಿವೆ, ಜಮ್ಮು ಮತ್ತು ಲಡಾಖ್ ಭಾಗದ ಜನ ಸಾಮಾನ್ಯರು ಈ ನಿಯೋಗದ ಭಾಗವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ಮತ್ತು 35 ಎ ವಿಧಿ ಅನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಅಮಿತ್ ಶಾ ಅವರು ಹಲವಾರು ಬಾರಿ ದೃಢವಾಗಿ ಸಮರ್ಥಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಸಂಯೋಜಿಸುವಲ್ಲಿ 370 ನೇ ವಿಧಿ ಮತ್ತು 35 ನೇ ವಿಧಿ ದೊಡ್ಡ ತಡೆಯಾಗಿತ್ತು ಎಂದು ಅವರು ಹೇಳಿದ್ದಾರೆ.
“ಇದು ಭಯೋತ್ಪಾದನೆಯ ಶವಪೆಟ್ಟಿಗೆಗೆ ನಾವು ಹಾಕುತ್ತಿರುವ ಕೊನೆಯ ಮೊಳೆ. ಕೆಲವರನ್ನು ಹೊರತುಪಡಿಸಿ ಎಲ್ಲಾ ನಾಗರಿಕರು ಸರ್ಕಾರದ ಈ ಕ್ರಮವನ್ನು ಬೆಂಬಲಿಸಿದ್ದಾರೆ ”ಎಂದು ಶಾ ಹೇಳಿದ್ದಾರೆ.
370ನೇ ವಿಧಿ ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ದೊಡ್ಡ ತಡೆಯಾಗಿತ್ತು. ಇನ್ನು ಮುಂದೆ ಅಲ್ಲಿ ಅಭಿವೃದ್ಧಿ ವೇಗವನ್ನು ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಈಗಾಗಲೇ ಆ ಭಾಗದ ಜನರಿಗೆ ಭರವಸೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.