ಲಕ್ನೋ : ಉತ್ತರಪ್ರದೇಶದ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರಕಾರವು ಆಡಳಿತಕ್ಕೆ ಬಂದು ಸೆಪ್ಟೆಂಬರ್ 19 ರಂದು ಎರಡೂವರೆ ವರ್ಷಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ಅದ್ದೂರಿ ಸಮಾರಂಭವನ್ನು ಏರ್ಪಡಿಸಲು ಅಲ್ಲಿನ ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಉತ್ತರಪ್ರದೇಶದ ಮಾಹಿತಿಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಅವಸ್ಥಿಯವರು ಮಾಹಿತಿಯನ್ನು ನೀಡಿದ್ದು, ಸಂಭ್ರಮಾಚರಣೆಯ ಮಾದರಿ ಹೇಗಿರಬೇಕೆಂಬುದನ್ನು ಇನ್ನು ಎರಡು ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.
“ರಾಜ್ಯ ಸರಕಾರವು ಸೌಭಾಗ್ಯ ಯೋಜನಾ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಸ್ವಚ್ಛ ಭಾರತ ಅಭಿಯಾನದಲ್ಲಿ ಶೌಚಾಲಯಗಳ ನಿರ್ಮಾಣ ಸೇರಿದಂತೆ ಹಲವಾರು ಮಹತ್ವಪೂರ್ಣ ಯೋಜನೆಗಳ ಅನುಷ್ಠಾನದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಈ ಹಿನ್ನಲೆಯಲ್ಲಿ ಎರಡುವರೆ ವರ್ಷಗಳ ಸರ್ಕಾರದ ಆಡಳಿತವು ಸಂಭ್ರಮಾಚರಣೆಗೆ ಅರ್ಹವಾಗಿದೆ” ಎಂದಿದ್ದಾರೆ.
ರಾಜ್ಯದಲ್ಲಿ ಸರಕಾರವು ಡೆಂಗ್ಯೂ, ಮಲೇರಿಯಾ ಮುಂತಾದ ರೋಗಗಳ ಪ್ರಮಾಣವನ್ನು ಕಡಿಮೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಉತ್ತರಪ್ರದೇಶದಲ್ಲಿ ಈ ವರ್ಷ ಡೆಂಗ್ಯೂ-ಮಲೇರಿಯಾ ಪ್ರಮಾಣ ಶೇಕಡಾ 60 ರಷ್ಟು ಕಡಿಮೆಯಾಗಿದೆ ಎಂದು ಅವಸ್ಥಿ ಹೇಳಿದ್ದಾರೆ.
“ಯೋಗಿ ಆದಿತ್ಯನಾಥ ಸರಕಾರವು ಅಪರಾಧ ಪ್ರಕರಣಗಳನ್ನು ಹತ್ತಿಕ್ಕುವಲ್ಲಿಯೂ ಯಶಸ್ಸನ್ನು ಗಳಿಸಿದೆ ಎಲ್ಲಾ ಹಬ್ಬಗಳನ್ನು ವರ್ಷಗಳಲ್ಲಿ ಶಾಂತಿಯುತವಾಗಿ ಆಚರಣೆ ಮಾಡಲಾಗುತ್ತಿದೆ” ಎಂದಿದ್ದಾರೆ.
ಹೂಡಿಕೆಗಳನ್ನು ಆಕರ್ಷಿಸಲು ನಡೆಸಲಾದ ಸಮಾವೇಶಗಳು ಮತ್ತು ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳ ಮತ್ತು ಅಯೋಧ್ಯಾದಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮಗಳು ಅತ್ಯಂತ ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ಜರುಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.