ನವದೆಹಲಿ: ಭಯೋತ್ಪಾದನೆಗೆ ಪ್ರಚೋದನೆ ಮತ್ತು ಹಣಕಾಸು ವಂಚನೆ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿರುವ ವಿವಾದಾತ್ಮಕ ಇಸ್ಲಾಂ ಧರ್ಮ ಬೋಧಕ ಝಾಕಿರ್ ನಾಯಕ್ನನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಲೇಷಿಯಾದ ಪ್ರಧಾನಿ ಡಾ. ಮಹಾತಿರ್ ಮೊಹಮ್ಮದ್ ಅವರನ್ನು ಕೋರಿದ್ದಾರೆ. ಈ ಕೋರಿಕೆಯ ಬಗ್ಗೆ ಮಲೇಷಿಯಾದ ಪ್ರಧಾನಿ ಯಾವ ಪ್ರತಿಕ್ರಿಯೆ ನೀಡಿದ್ದಾರೆ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಈ ವಿಷಯದ ಬಗ್ಗೆ ಉಭಯ ದೇಶಗಳ ಅಧಿಕಾರಿಗಳು ಸಂಪರ್ಕದಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಸ್ಟರ್ನ್ ಎಕನಾಮಿಕ್ ಫೋರಂ ಸೈಡ್ಲೈನಿನಲ್ಲಿ ಪ್ರಧಾನಿ ಮೋದಿಯವರು ಮಲೇಷ್ಯಾದ ಪ್ರಧಾನಿಯೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಈ ಬಗ್ಗೆ ಮಾಹಿತಿಯನ್ನು ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರು, “ಝಾಕೀರ್ ವಿಷಯದ ಬಗ್ಗೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿರುತ್ತಾರೆ ಎಂದು ಎರಡೂ ರಾಷ್ಟ್ರಗಳು ನಿರ್ಧರಿಸಿದೆ ಮತ್ತು ಇದು ನಮಗೆ ಅತ್ಯಂತ ಪ್ರಮುಖ ವಿಷಯವಾಗಿದೆ. ಇದು ಉಭಯ ನಾಯಕರ ನಡುವೆ ನಡೆಯುತ್ತಿರುವ ಎರಡನೇ ಸಭೆಯಾಗಿದ್ದು, ಕಳೆದ ವರ್ಷ ಮೇ ತಿಂಗಳಲ್ಲಿ ಪ್ರಧಾನಿ ಡಾ. ಮಹಾತಿರ್ ಅವರನ್ನು ಪುತ್ರಜಯದಲ್ಲಿ ಭೇಟಿಯಾಗಿದ್ದರು” ಎಂದಿದ್ದಾರೆ.
ಗುರುವಾರ ಮೋದಿಯವರು ರಷ್ಯಾದ ವ್ಲಾಡಿವೋಸ್ಟಾಕ್ಗೆ ಬಂದಿಳಿದಿದ್ದು, ವಿಶ್ವದ ಅನೇಕ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದಾರೆ. ಗುರುವಾರ ಮುಂಜಾನೆ, ಅವರು ಜಪಾನ್ ಪ್ರಧಾನಿ ಶಿಂಜೊ ಅಬೆ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ಬಹುಮುಖ ಸಂಬಂಧಗಳ ಬಗ್ಗೆ ಚರ್ಚಿಸಿದರು.
ಝಾಕೀರ್ ನಾಯ್ಕ್ ಮಲೇಷ್ಯಾಗೆ ತನ್ನ ನೆಲೆಯನ್ನು ಸ್ಥಳಾಂತರಿಸಿದ್ದಾನೆ. ಅದು ಆತನಿಗೆ ಶಾಶ್ವತ ನೆಲೆಯನ್ನು ಕಲ್ಪಿಸಿಕೊಟ್ಟಿದೆ. ಆದರೆ ಮುಂದಿನ ವರ್ಷದೊಳಗೆ, ಭಾರತೀಯ ಏಜೆನ್ಸಿಗಳು ಭಾರತದಲ್ಲಿ ಆತನ ಎಲ್ಲ ಚಟುವಟಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿವೆ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನಿನಡಿಯಲ್ಲಿ ಆತನ NGO ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಅನ್ನು ನಿಷೇಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.