ಪುತ್ತೂರು: ಶಿಕ್ಷಣ ಸಂಸ್ಥೆಗಳ ಉಪನ್ಯಾಸಕಿಯರಿಗೆ ಮಹಿಳಾ ದೌರ್ಜನ್ಯ ಹಾಗೂ ಪೂರಕ ಕಾನೂನು ಮಾಹಿತಿಗಳನ್ನು ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಸಮಾಜದಲ್ಲಿ ಬದಲಾವಣೆಯನ್ನು ಕಾಣಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ.ಜಯರಾಮ ಭಟ್ ಹೇಳಿದರು.
ಅವರು ಕಾಲೇಜಿನ ಮಹಿಳಾ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ಪೂರಕ ಕಾನೂನು ಮಾಹಿತಿ ಬಗೆಗಿನ ಕಾರ್ಯಾಗಾರವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಮಾತನಾಡಿ ಉಚ್ಚ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ಉದ್ಯೋಗಿಗಳಲ್ಲಿ ಜಾಗೃತಿಯನ್ನು ಮೂಡಿಸುವಂತಹ ಕಾರ್ಯಾಗಾರದ ಅಗತ್ಯವಿದೆ. ಸಂವೇದನಾಶೀಲ ಕಾರ್ಯಕ್ರಮಗಳ ಮುಖಾಂತರ ಪರಸ್ಪರ ಅರ್ಥೈಸುವಿಕೆಯೂ ಏರ್ಪಡುತ್ತದೆ ಎಂದು ನುಡಿದರು.
ವೇದಿಕೆಯಲ್ಲಿ ಮಂಗಳೂರಿನ ಡೀಡ್ಸ್ ಸಂಸ್ಥೆಯ ನಿರ್ದೇಶಕಿ ಮರ್ಲಿನ್ ಮಾರ್ಟಿಸ್, ಸಂವೇದಿ ದ್ವೈಮಾಸಿಕ ಪತ್ರಿಕೆಯ ಸಂಪಾದಕಿ ಗುಲಾಬಿ ಬಿಳಿಮಲೆ, ಸಂಚಲನ ಸಂಘಟನೆಯ ರಾಜ್ಯಾಧ್ಯಕ್ಷೆ ವತ್ಸಲಾ ನಾಯಕ್ ಉಪಸ್ಥಿತರಿದ್ದರು.
ಮಹಿಳಾ ಸಂಘದ ಸಂಯೋಜಕಿ ಡಾ.ದುರ್ಗಾರತ್ನ ಸಿ ಸ್ವಾಗತಿಸಿ ಪ್ರಸ್ತಾವಿಸಿದರು. ಉಪನ್ಯಾಸಕಿ ಅನಿತಾ ಕಾಮತ್ ವಂದಿಸಿದರು. ಉಪನ್ಯಾಸಕಿ ಡಾ.ಗೀತಾ ಕುಮಾರಿ ಕಾರ್ಯಕ್ರಮ ನಿರ್ವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.