ಜೋಸ್: ನೈಜೀರಿಯಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ, ಸೋಮವಾರ ಜೋಸ್ ನಗರದಲ್ಲಿನ ಮಸೀದಿ ಮತ್ತು ರೆಸ್ಟೋರೆಂಟ್ ಮೇಲೆ ಬಾಂಬ್ ದಾಳಿ ನಡೆಸಿ 44 ಮಂದಿಯನ್ನು ಹತ್ಯೆ ಮಾಡಿದ್ದಾರೆ.
ರಂಜಾನ್ ಹಿನ್ನಲೆಯಲ್ಲಿ ಮಸೀದಿಯಲ್ಲಿ ಉಪನ್ಯಾಸ ಕಾರ್ಯವನ್ನು ಆಯೋಜಿಸಲಾಗಿತ್ತು, ಅಪಾರ ಪ್ರಮಾಣದಲ್ಲಿ ಜನರು ಇಲ್ಲಿ ನೆರೆದಿದ್ದರು. ಈ ವೇಳೆ ಬಾಂಬ್ ಸ್ಫೋಟಗೊಂಡಿದೆ.
ಇನ್ನೊಂದೆಡೆ ಗಣ್ಯರು, ರಾಜಕಾರಣಿಗಳು ಆಗಮಿಸುವ ರೆಸ್ಟೋರೆಂಟ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಈ ಎರಡು ಘಟನೆಯಲ್ಲಿ ಒಟ್ಟು 44 ಮಂದಿ ಮೃತರಾಗಿದ್ದಾರೆ. 67 ಜನರು ಗಾಯಗೊಂಡಿದ್ದಾರೆ.
ನೈಜೀರಿಯಾದಲ್ಲಿ ಬೋಕೋ ಹರಾಮ್ ಉಗ್ರರ ಸಕ್ರಿಯರಾಗಿದ್ದು, ಪದೇ ಪದೇ ದಾಳಿಗಳನ್ನು ನಡೆಸುತ್ತಲೇ ಇದ್ದಾರೆ. ಈ ದಾಳಿಯಲ್ಲೂ ಅವರ ಕೈವಾಡವಿದೆ ಎಂದು ಶಂಕಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.