ಸಿಯೋಲ್: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ದೇಶದ ಕಂಪನಿಗಳಿಗೆ ತನ್ನ ಸರ್ಕಾರ ಯಾವುದೇ ಬೆಂಬಲವನ್ನು ನೀಡುವುದಿಲ್ಲ ಎಂದು ದಕ್ಷಿಣ ಕೊರಿಯಾ ಭಾರತಕ್ಕೆ ಭರವಸೆ ನೀಡಿದೆ. ಪಿಒಕೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದು, ಪಾಕಿಸ್ಥಾನವು ಇದನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ.
ಈ ಪ್ರದೇಶದಲ್ಲಿ ಶಾಪ್ಗಳನ್ನು ಸ್ಥಾಪಿಸುವ ಕಂಪನಿಗಳಿಗೆ ಸರ್ಕಾರದ ಸಬ್ಸಿಡಿಗಳು ಮತ್ತು ತೆರಿಗೆ ವಿನಾಯಿತಿಗಳ ರೂಪದಲ್ಲಿ ನೀಡಲಾಗುವ ಬೆಂಬಲವನ್ನು ಹಿಂಪಡೆಯುವ ನಿರ್ಧಾರ 2014 ರಿಂದ ಜಾರಿಯಲ್ಲಿದೆ ಎಂದು ದಕ್ಷಿಣ ಕೊರಿಯಾ ಹೇಳಿದೆ.
ಈ ಪ್ರದೇಶದಲ್ಲಿ ಹೂಡಿಕೆಗಳು ಮುಂದುವರಿಯಲಿವೆ ಎಂದು ಪಾಕಿಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ರಾಯಭಾರಿ ಹೇಳಿದ್ದಾರೆ ಎಂದು ಪಾಕಿಸ್ಥಾನದ ಮಾಧ್ಯಮ ವರದಿ ಮಾಡಿದ ತರುವಾಯ ದಕ್ಷಿಣ ಕೊರಿಯಾದಿಂದ ಭಾರತಕ್ಕೆ ಈ ಭರವಸೆ ಬಂದಿದೆ. ಭಾರತದ ಸಾರ್ವಭೌಮತ್ವವನ್ನು ಉಲ್ಲಂಘಿಸುವ ಸಿಪಿಇಸಿ ಸೇರಿದಂತೆ ಈ ಪ್ರದೇಶದ ಯೋಜನೆಗಳ ಬಗ್ಗೆ ಭಾರತವು ತನ್ನ ಸ್ನೇಹಪರ ರಾಷ್ಟ್ರಗಳನ್ನು ತಲುಪುವ ಪ್ರಯತ್ನಗಳನ್ನು ಮಾಡುತ್ತಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಸ್ತುತ ದಕ್ಷಿಣ ಕೊರಿಯಾ ಭೇಟಿಯಲ್ಲಿರುವ ಸಂದರ್ಭದಲ್ಲಿ ಈ ಭರವಸೆಯನ್ನು ನೀಡಲಾಗಿದೆ. ರಾಜನಾಥ್ ಅವರು ಅಲ್ಲಿನ ಪ್ರಧಾನಿ ಲೀ ನಕ್-ಯೋನ್ ಅವರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ.
ಸಿಂಗ್ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಜಪಾನಿನ ಪ್ರಧಾನಿ ಶಿಂಜೊ ಅವರನ್ನು ಈಗಾಗಲೇ ಭೇಟಿಯಾಗಿದ್ದಾರೆ. ಜಪಾನ್ ಬಳಿಕ ಅವರು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.