ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ದೌರ್ಜನ್ಯಗಳನ್ನು ಎಸಗುತ್ತಿದೆ ಎಂಬ ಆರೋಪವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿರಾಕರಿಸಿದ್ದಾರೆ. ಸೇನೆಯು ಈ ಪ್ರದೇಶದಲ್ಲಿ ಕೇವಲ ಭಯೋತ್ಪಾದಕರೊಂದಿಗೆ ಹೋರಾಡುತ್ತಿದೆ ಎಂದಿದ್ದಾರೆ. ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಜಮ್ಮು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುತ್ತಿದೆ ಎಂದು ಹೇಳಿದ್ದಾರೆ.
“ಸೇನೆಯ ದೌರ್ಜನ್ಯದ ಬಗ್ಗೆ ಯಾವುದೇ ಪ್ರಶ್ನೆ ಉದ್ಭವಿಸುವುದೇ ಇಲ್ಲ. ಭಯೋತ್ಪಾದಕರ ವಿರುದ್ಧ ಹೋರಾಡಲು ಭಾರತೀಯ ಸೇನೆ ಇದೆ” ಎಂದು ದೋವಲ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಗೊಳಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕ್ರಮವನ್ನು ಬಹುಪಾಲು ಕಾಶ್ಮೀರಿಗರು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪಾಕಿಸ್ಥಾನದಿಂದ ಇಂಟರ್ಸೆಪ್ಟ್ ಸಂದೇಶಗಳು ಬರುತ್ತಿರುವ ಬಗ್ಗೆ ಉಲ್ಲೇಖಿಸಿದ ಅವರು, “ಗಡಿಯಲ್ಲಿ 20 ಕಿ.ಮೀ ದೂರದಲ್ಲಿರುವ ಪಾಕಿಸ್ಥಾನಿ ಕಮ್ಯೂನಿಕೇಶನ್ ಟವರ್ಗಳಿವೆ, ಅಲ್ಲಿಂದ ಅವರು ಸಂದೇಶಗಳನ್ನು ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ದೋವಲ್ ಹೇಳಿದ್ದಾರೆ.
“ಹೆಚ್ಚಿನ ಕಾಶ್ಮೀರಿಗಳು 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಬೆಂಬಲಿಸಿದ್ದಾರೆ ಎಂದು ನನಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ. ಅವರು ಹೆಚ್ಚಿನ ಅವಕಾಶಗಳು, ಭವಿಷ್ಯ, ಆರ್ಥಿಕ ಪ್ರಗತಿ ಮತ್ತು ಉದ್ಯೋಗಾವಕಾಶಗಳನ್ನು ಎದುರು ನೋಡುತ್ತಿದ್ದಾರೆ” ಎಂದು ದೋವಲ್ ಹೇಳಿದ್ದಾರೆ. “ಕೆಲವೇ ಕೆಲವು ದುಷ್ಕರ್ಮಿಗಳು ಇದನ್ನು ವಿರೋಧಿಸುತ್ತಿದ್ದಾರೆ” ಎಂದಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ, 370 ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ದೋವಲ್ ಪ್ರಮುಖ ಪಾತ್ರ ವಹಿಸಿದ್ದಾರೆ. ಹಿರಿಯ ಅಧಿಕಾರಿಗಳ ಪ್ರಕಾರ, ಈ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ನಿಭಾಯಿಸುವ ಕಾರ್ಯತಂತ್ರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ದೋವಲ್ ಅವರು ರೂಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.