ನವದೆಹಲಿ: ಭಾರತವು ತನ್ನದೇ ಆದ ಗುಣಮಟ್ಟಗಳ ಅನ್ವಯ ಗುಂಡು ನಿರೋಧಕ ಜಾಕೆಟ್ಗಳನ್ನು ರಫ್ತು ಮಾಡಲು ಪ್ರಾರಂಭಿಸಿದೆ. ಅತ್ಯುನ್ನತ ಗುಣಮಟ್ಟವನ್ನು ಹೊಂದಿರುವ ಈ ಜಾಕೆಟ್ಗಳನ್ನು ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ 100 ಕ್ಕೂ ಹೆಚ್ಚು ರಫ್ತು ಮಾಡಲಾಗುತ್ತಿದೆ ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ತಿಳಿಸಿದೆ.
360 ಡಿಗ್ರಿ ರಕ್ಷಣೆ ಒದಗಿಸುವ ತನ್ನದೇ ಆದ ರಾಷ್ಟ್ರೀಯ ಮಾನದಂಡವನ್ನು ಹೊಂದಿರುವ ಬುಲೆಟ್ ಪ್ರೂಪ್ಗಳನ್ನು ಹೊಂದಿದ ವಿಶ್ವದ ನಾಲ್ಕನೇಯ ದೇಶವಾಗಿ ಭಾರತ ಹೊರಹೊಮ್ಮಿದೆ. ಯುಎಸ್, ಯುಕೆ ಮತ್ತು ಜರ್ಮನಿಯ ನಂತರ ಭಾರತ ನಾಲ್ಕನೇ ಸ್ಥಾನದಲ್ಲಿದೆ ಎಂದು ಬಿಐಎಸ್ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಐಎಸ್ ರಾಷ್ಟ್ರೀಯ ಮಂಡಳಿಯಾಗಿದ್ದು, ಅದು ವಿವಿಧ ಉತ್ಪನ್ನಗಳು ಮತ್ತು ಸೇವೆಗಳಿಗೆ ಗುಣಮಟ್ಟದ ಮಾನದಂಡಗಳನ್ನು ನಿಗದಿಪಡಿಸುತ್ತದೆ. ಇಲ್ಲಿಯವರೆಗೆ, ಇದು 20,000 ಕ್ಕೂ ಹೆಚ್ಚು ಮಾನದಂಡಗಳನ್ನು ನಿಗದಿಪಡಿಸಿದೆ.
“ಬುಲೆಟ್ ಪ್ರೂಫ್ ಜಾಕೆಟ್ಗಳನ್ನು ಬಿಐಎಸ್ ಮಾನದಂಡಗಳ ಪ್ರಕಾರ ಭಾರತದಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಖರೀದಿ ಮಾಡಲಾಗುತ್ತಿದೆ. ಮಾತ್ರವಲ್ಲದೇ ಇತರ 100 ದೇಶಗಳಿಗೂ ಇದನ್ನು ಮಾರಾಟ ಮಾಡಲಾಗುತ್ತಿದೆ” ಎಂದು ಬಿಐಎಸ್ ಉಪನಿರ್ದೇಶಕ ರಾಜೇಶ್ ಬಜಾಜ್ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಬುಲೆಟ್ ಪ್ರೂಫ್ ಜಾಕೆಟ್ಗಳಿಗೆ ತನ್ನದೇ ಆದ ರಾಷ್ಟ್ರೀಯ ಮಾನದಂಡಗಳನ್ನು ಹೊಂದಿರುವ ವಿಶ್ವದ ನಾಲ್ಕನೇ ದೇಶ ಭಾರತ. “ನಾವು ಎಲ್ಲಾ ಪಾಲುದಾರರನ್ನು ಒಟ್ಟುಗೂಡಿಸಿ ರಾಷ್ಟ್ರೀಯ ಗುಣಮಟ್ಟವನ್ನು ನಿರ್ಧರಿಸಿದ್ದೇವೆ, ಅದು ಅಂತಾರರಾಷ್ಟ್ರೀಯ ಗುಣಮಟ್ಟದ್ದಾಗಿದೆ. ಸಶಸ್ತ್ರ ಪಡೆಗಳು ಈಗ ಈ ಮಾನದಂಡದ ಪ್ರಕಾರ ಖರೀದಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.