ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಬಿವಿಪಿ ಅಭೂತಪೂರ್ವವಾದ ಜಯವನ್ನು ಗಳಿಸಿದೆ. ಶುಕ್ರವಾರ ಸಂಜೆ ಫಲಿತಾಂಶ ಹೊರಬಿದ್ದಿದ್ದು, ನಾಲ್ಕು ಪ್ರಮುಖ ಸ್ಥಾನಗಳ ಪೈಕಿ ಮೂರನ್ನು ಎಬಿವಿಪಿ ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್ ನೇತೃತ್ವದ ಎನ್ಎಸ್ಯುಐ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.
ನಾಲ್ಕು ಪ್ರಮುಖ ಹುದ್ದೆಗಳ ಪೈಕಿ ಎಬಿವಿಪಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ಸಿನ ವಿದ್ಯಾರ್ಥಿ ಘಟಕ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಕಾರ್ಯದರ್ಶಿ ಸ್ಥಾನವನ್ನು ಪಡೆದುಕೊಂಡಿದೆ.
ಎಬಿವಿಪಿ ಅಭ್ಯರ್ಥಿಗಳಾದ ಅಕ್ಷಿತ್ ದಹಿಯಾ, ಪ್ರದೀಪ್ ತನ್ವರ್ ಮತ್ತು ಶಿವಾಂಗಿ ಖರ್ವಾಲ್ ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾಗಿದ್ದಾರೆ. ಎನ್ಎಸ್ಯುಐನ ಆಕಾಶ್ ಚೌಧರಿ ಅವರು ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾದರು.
ಈ ವರ್ಷ, ವಿಶ್ವವಿದ್ಯಾಲಯದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ಹುದ್ದೆಗಳಿಗೆ 16 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಒಂದು ವರ್ಷದ ಅವಧಿಗೆ ಇವರ ಆಯ್ಕೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.