ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಈ ಹಿನ್ನಲೆಯಲ್ಲಿ ಬಿಜೆಪಿ ‘ಸೇವಾ ಸಪ್ತಾಹ’ವನ್ನು ಆಯೋಜನೆಗೊಳಿಸಿದ್ದು, ಇಂದಿನಿಂದ ಅಂದರೆ ಸೆ. 14 ರಿಂದ ಸೆ. 20 ರ ವರೆಗೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ನಿರತರಾಗಲಿದ್ದಾರೆ.
ಈ ವಾರದಲ್ಲಿ, ಬಿಜೆಪಿ ಪಕ್ಷದ ಕಾರ್ಯಕರ್ತರು ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಬಡವರಿಗೆ ಸಹಾಯ, ಸ್ವಚ್ಛತಾ ಕಾರ್ಯ ಸೇರಿದಂತೆ ಹಲವು ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ.
“ದೇಶದ ಬಡ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತಹ ನಾಯಕ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಆದ್ದರಿಂದ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 14-20ರವರೆಗೆ ‘ಸೇವಾ ಸಪ್ತಾಹ’ ಅನ್ನು ಆಚರಿಸಲು ಬಿಜೆಪಿ ನಿರ್ಧರಿಸಿದೆ”ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣುಗಳನ್ನು ವಿತರಿಸುವ ಮೂಲಕ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೇವಾ ಸಪ್ತಾಹ ಆಚರಣೆಯನ್ನು ಉದ್ಘಾಟಿಸಿದರು. ಸೇವೆಯ ಮಹತ್ವ ಮತ್ತು ಸ್ವಚ್ಛತೆಯ ಪ್ರಾಮುಖ್ಯತೆಯನ್ನು ತೋರಿಸಿಕೊಡುವ ಸಲುವಾಗಿ ಅವರುಗಳು ಆಸ್ಪತ್ರೆಯ ಆವರಣಗಳನ್ನು ಗುಡಿಸಿ ಸ್ವಚ್ಛ ಮಾಡಿದ್ದಾರೆ.
ಇದಲ್ಲದೇ ಸಪ್ತಾಹದ ಅಂಗವಾಗಿ, ಹಲವಾರು ಪ್ರದರ್ಶನಗಳನ್ನು ಸಹ ಆಯೋಜನೆಗೊಳಿಸಲಾಗುತ್ತಿದೆ. ಪ್ರದರ್ಶನದ ಮೂಲಕ ಪ್ರಧಾನಿ ಮೋದಿ ಮಾಡಿದ ಸಾಮಾಜಿಕ ಕಾರ್ಯಗಳನ್ನು ಪ್ರತಿಬಿಂಬಿಸಲಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಮಾಡಿದ ಸಾಧನೆಯನ್ನು ಪ್ರದರ್ಶಿಸಲು ಬಿಜೆಪಿ ಕಾರ್ಯಕರ್ತರು ಪ್ರತಿ ಜಿಲ್ಲೆಯಲ್ಲೂ ಪ್ರದರ್ಶನಗಳನ್ನು ಆಯೋಜನೆಗೊಳಿಸಲಿದ್ದಾರೆ.
ಒಂದು ವಾರದಲ್ಲಿ, ವಿವಿಧ ಆರೋಗ್ಯ ತಪಾಸಣೆ ಕಾರ್ಯಕ್ರಮಗಳು, ರಕ್ತದಾನ ಶಿಬಿರಗಳು, ಕಣ್ಣಿನ ತಪಾಸಣೆ ಶಿಬಿರಗಳು ದೇಶವ್ಯಾಪಿಯಾಗಿ ಆಯೋಜನೆಗೊಳ್ಳಲಿದೆ.
#WATCH BJP President Amit Shah with working president JP Nadda and leaders Vijay Goel and Vijender Gupta sweeps the floor in AIIMS as part of the party’s ‘Seva Saptah’campaign launched to celebrate PM Modi’s birthday pic.twitter.com/1bO0nzGgoU
— ANI (@ANI) September 14, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.