ನವದೆಹಲಿ: ಮುಂದಿನ ಎರಡು ವರ್ಷಗಳೊಳಗೆ ಸುಲಲಿತ ಉದ್ಯಮ ಶ್ರೇಯಾಂಕದಲ್ಲಿ ಭಾರತದ ಸ್ಥಾನವನ್ನು ಟಾಪ್ 50ರೊಳಗೆ ತರುವಂತೆ ಮಾಡಲು ಸರ್ಕಾರ ಕಾರ್ಯೋನ್ಮುಖಗೊಂಡಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಕಾಂತ್ ಹೇಳಿದ್ದಾರೆ.
ಅಲ್ಲದೇ ಮುಂದಿನ ಐದು ವರ್ಷದಲ್ಲಿ ಟಾಪ್ 25ರೊಳಗೆ ತರುವ ನಿಟ್ಟಿನಲ್ಲೂ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಈ ಗುರಿಯನ್ನು ತಲುಪಲು ಪ್ರಧಾನಿ ನರೇಂದ್ರ ಮೋದಿಯವರ ಶ್ರದ್ಧೆಯ ಬಗ್ಗೆ ವಿವರಿಸಿದ ಕಾಂತ್, 2019ರ ಸುಲಲಿತ ಉದ್ಯಮ ಶ್ರೇಯಾಂಕದಲ್ಲಿ ಭಾರತವು ಭಾರತವು 77ನೇ ಸ್ಥಾನವನ್ನು ಪಡೆದುಕೊಂಡಿದೆ. ಮುಂದಿನ ಎರಡು ವರ್ಷದಲ್ಲಿ ಸ್ಥಾನವನ್ನು ಟಾಪ್-50 ಒಳಗೆ ತರಲು ಸರ್ಕಾರ ಉತ್ತೇಜನ ನೀಡುತ್ತಿದೆ. ಮುಂದಿನ ಐದು ವರ್ಷದಲ್ಲಿ ಟಾಪ್ 25ರೊಳಗೆ ಸ್ಥಾನವನ್ನು ಸೇರಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ ಎಂದಿದ್ದಾರೆ.
ಭಾರತದ ಭವಿಷ್ಯದ ಪ್ರಗತಿ ಮತ್ತು ಅಭಿವೃದ್ಧಿಗೆ ಡಿಜಿಟಲೀಕರಣದ ಪ್ರಾಮುಖ್ಯತೆಯನ್ನು ಕಾಂತ್ ಒತ್ತಿ ಹೇಳಿದ್ದಾರೆ. ಆರ್ಥಿಕತೆಯ ಪ್ರತಿ ವಲಯದಲ್ಲೂ ಡಿಜಿಟಲ್ ಅಪ್ಲಿಕೇಶನ್ ಅನ್ನು ತರಲು ಸರಕಾರ ಉತ್ತೇಜನ ನೀಡುತ್ತಿದೆ ಎಂದು ಹೇಳಿದ್ದಾರೆ.
ಅನಗತ್ಯ ನೀತಿ ಮತ್ತು ನಿಯಮಗಳನ್ನು ಬದಿಗಿರಿಸಿ ನಾವು ಮುನ್ನಡೆಯಬೇಕು. ಈಗಾಗಲೇ ನಮ್ಮ ಸರಕಾರ 1300 ಕಾನೂನುಗಳನ್ನು ತೆಗೆದು ಹಾಕಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.