ಕೇವಡಿಯಾ: ಜಮ್ಮು ಕಾಶ್ಮೀರದ ಬಗೆಗೆ ನಾವು ತೆಗೆದುಕೊಂಡ ನಿರ್ಧಾರ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಂದ ಪ್ರೇರಿತಗೊಂಡಿದ್ದು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. 370ನೇ ವಿಧಿಯನ್ನು ತೆಗೆದುಹಾಕುವ ಮೂಲಕ ನಾವು ದಶಕಗಳ ಹಳೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ.
ಗುಜರಾತ್ನ ಯಶಸ್ಸು ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದ ಅವರು, ರಾಜ್ಯದ ಜನರು ಜೀವನ ಮಟ್ಟವನ್ನು ಸುಧಾರಿಸುವಲ್ಲಿನ ತಮ್ಮ ಅನುಭವದ ಮೂಲಕ ಇತರ ರಾಜ್ಯಗಳಿಗೆ ಸಹಾಯ ಮಾಡಬೇಕು ಎಂದು ಅವರು ಕೋರಿದರು. ತನ್ನ 69 ನೇ ಹುಟ್ಟುಹಬ್ಬವನ್ನು ತನ್ನ ತವರು ರಾಜ್ಯವಾದ ಗುಜರಾತ್ನಲ್ಲಿ ಆಚರಿಸುವ ಸಲುವಾಗಿ ಅವರು ಗುಜರಾತಿಗೆ ಆಗಮಿಸಿದ್ದು, ಕೆವಾಡಿಯಾದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ ಏಕತಾ ಪ್ರತಿಮೆಗೂ ಭೇಟಿ ನೀಡಿ ಗೌರವಾರ್ಪಣೆ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿದ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಿರ್ಧಾರಗಳ ಬಗ್ಗೆ ಉಲ್ಲೇಖಿಸಿದ ಅವರು, ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಹೈದರಾಬಾದ್ ವಿಮೋಚನಾ ದಿನವು ಸರ್ದಾರ್ ಪಟೇಲ್ ಅವರ ದೂರದೃಷ್ಟಿಯ ಪರಿಣಾಮದಿಂದ ಸಾಧ್ಯವಾಯಿತು ಎಂದರು. 1948 ರ ಸೆ.17ರಂದು ಹೈದರಾಬಾದ್ ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಿಕೊಳ್ಳಲಾಗಿತ್ತು.
ಏಕತಾ ಪ್ರತಿಮೆಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕಳೆದ ವರ್ಷ ಉದ್ಘಾಟನೆಗೊಂಡ ಏಕತಾ ಪ್ರತಿಮೆ ಸಂಕೀರ್ಣಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದರು. “133 ವರ್ಷಗಳಷ್ಟು ಹಳೆಯದಾದ ಅಮೆರಿಕಾದ ಸ್ಟ್ಯಾಚ್ಯೂ ಆಫ್ ಲಿಬರ್ಟಿಗೆ ದಿನಕ್ಕೆ ಸುಮಾರು 10,000 ಭೇಟಿ ನೀಡುತ್ತಾರೆ. ಆದರೆ 11 ತಿಂಗಳುಗಳ ಸ್ಟ್ಯಾಚು ಆಫ್ ಯುನಿಟಿಗೆ ದಿನಕ್ಕೆ 8,500 ಜನರು ಆಗಮಿಸುತ್ತಾರೆ” ಎಂದರು. ಕಳೆದ ವರ್ಷ ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದಂದು ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆಯನ್ನು ಪ್ರಧಾನ ಮಂತ್ರಿ ಉದ್ಘಾಟಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.