ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಎಚ್ಎಎಲ್ ವಿಮಾನನಿಲ್ದಾಣದಲ್ಲಿ ಲಘು ಯುದ್ಧ ವಿಮಾನ ತೇಜಸ್ನಲ್ಲಿ ಹಾರಾಟ ನಡೆಸಿದ್ದಾರೆ. ಎರಡು ಸೀಟುಗಳ ಯುದ್ಧ ವಿಮಾನದಲ್ಲಿ ಕಾಕ್ಪಿಟ್ನ ಪೈಲೆಟ್ನ ಹಿಂಭಾಗದ ಕೋ ಪೈಲೆಟ್ ರೇರ್ ಸೀಟಿನಲ್ಲಿ ರಾಜನಾಥ್ ಆಸೀನರಾಗಿದ್ದರು. ತೇಜಸ್ ಯುದ್ಧ ವಿಮಾನದಲ್ಲಿ ಹಾರಾಡಿದ ಮೊದಲ ರಕ್ಷಣಾ ಸಚಿವ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ರಾಜನಾಥ್ ಸಿಂಗ್ ಅವರು ಸುಮಾರು 30 ನಿಮಿಷಗಳ ಕಾಲ ತೇಜಸ್ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ)ದ ಉತ್ಪನ್ನಗಳ ಪ್ರದರ್ಶನದಲ್ಲಿಯೂ ಇವರು ಪಾಲ್ಗೊಳ್ಳಲಿದ್ದಾರೆ.
ತೇಜಸ್ ಅನ್ನು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಮತ್ತು ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ವಿನ್ಯಾಸಗೊಳಿಸಿದೆ ಮತ್ತು ಅಭಿವೃದ್ಧಿಪಡಿಸಿದೆ. ಈ ಸಿಂಗಲ್-ಎಂಜಿನ್ ಫೈಟರ್ ಮಿಗ್ -21 ವಿಮಾನವನ್ನು ರಿಪ್ಲೇಸ್ ಮಾಡಲು ವಾಯುಸೇನೆಗೆ ಅವಕಾಶವನ್ನು ಕಲ್ಪಿಸಿದೆ.
2017 ರಲ್ಲಿ, ಡಿಫೆನ್ಸ್ ಅಕ್ವಿಸಿಷನ್ ಕೌನ್ಸಿಲ್ (ಡಿಎಸಿ) 83 ಲಘು ಯುದ್ಧ ವಿಮಾದ ತೇಜಸ್ ಎಂಕೆ 1 ಎ ವಿಮಾನಗಳನ್ನು ಖರೀದಿ ಮಾಡುವ ಪ್ರಸ್ತಾವಣೆಗೆ ಅನುಮೋದನೆಯನ್ನು ನೀಡಿತ್ತು. ಎಚ್ಎಎಲ್ ಸಹ ಜೆಟ್ನ ಉತ್ಪಾದನೆಯನ್ನು ವರ್ಷಕ್ಕೆ 8 ರಿಂದ 16 ಕ್ಕೆ ಹೆಚ್ಚಿಸಿದೆ. 83 ತೇಜಸ್ ವಿಮಾನಗಳ ಪೈಕಿ, 10 ಎರಡು ಸೀಟುಗಳ ವರ್ಶನ್ ಆಗಿದೆ ಮತ್ತು ಐಎಎಫ್ ತನ್ನ ಪೈಲೆಟ್ಗಳ ತರಬೇತಿಗಾಗಿ ಈ ವಿಮಾನಗಳನ್ನು ಬಳಸುತ್ತದೆ.
#WATCH Defence Minister Rajnath Singh flies in Light Combat Aircraft (LCA) Tejas, in Bengaluru. #Karnataka pic.twitter.com/LTyJvP61bH
— ANI (@ANI) September 19, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.