ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಿದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೆಪ್ಟೆಂಬರ್ 25 ರಂದು ದೆಹಲಿಯಲ್ಲಿ ಜನ-ಜಾಗರಣ್ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ.
ಜನ ಜಾಗರಣೆ ಕಾರ್ಯಕ್ರಮವು 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದರಿಂದಾದ ಪ್ರಯೋಜನಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವ ಸಾರ್ವಜನಿಕ ಜಾಗೃತಿ ಅಭಿಯಾನವಾಗಿದೆ.
“370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ಬಗ್ಗೆ ದೆಹಲಿ ಜನರಿಗೆ ಅರಿವು ಮೂಡಿಸಲು ಬಿಜೆಪಿ ಬಯಸಿದೆ. ಈ ನಿಟ್ಟಿನಲ್ಲಿ, ಬಿಜೆಪಿ ಜನ ಜಾಗರಣ್ ಅಭಿಯಾನವನ್ನು ಪ್ರಾರಂಭಿಸಲಿದೆ, ಇದನ್ನು ಸೆಪ್ಟೆಂಬರ್ 25 ರಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ. ಈ ಅಭಿಯಾನ ಮುಂದಿನ 15 ರವರೆಗೆ ನಡೆಯಲಿದೆ” ಎಂದು ಬಿಜೆಪಿ ಶಾಸಕ ಮತ್ತು ದೆಹಲಿ ಪ್ರತಿಪಕ್ಷದ ನಾಯಕ ವಿಜೇಂದರ್ ಗುಪ್ತಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
“ನಾವು ಈ ಅಭಿಯಾನದ ಅಡಿಯಲ್ಲಿ ದೆಹಲಿಯ ಪ್ರತಿಯೊಂದು ಮೂಲೆಯನ್ನೂ ತಲುಪುತ್ತೇವೆ ಮತ್ತು ಜನರೊಂದಿಗೆ ಸಂವಹನ ನಡೆಸುತ್ತೇವೆ ಮತ್ತು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ನಿರ್ಧಾರದ ಬಗ್ಗೆ ಅವರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಜನ ಜಾಗರಣ ಅಭಿಯಾನದ ಅಡಿಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ 370 ಸ್ಥಳಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು, ಇದರಡಿಯಲ್ಲಿ ಸಣ್ಣ ಸಭೆಗಳನ್ನು ಮತ್ತು ಅನೇಕ ಅಭಿಯಾನಗಳನ್ನು ನಡೆಸಲಾಗುವುದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.