ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿ ಸಂಭವಿಸುವುದನ್ನು ಭದ್ರತಾ ಪಡೆಗಳು ತಪ್ಪಿಸಿವೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ ಕಥುವಾ ಪ್ರದೇಶದಿಂದ ಸುಮಾರು 40 ಕೆಜಿ ಸ್ಪೋಟಕಗಳನ್ನು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಥುವಾದ ದಿಲಾವಾಲ್ ಪ್ರದೇಶದ ದೆವಾಲ್ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯ ವೇಳೆ ಈ ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ವರದಿಗಳ ಪ್ರಕಾರ, ಪ್ರಕರಣದ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಈ ಬಗೆಗಿನ ಹೆಚ್ಚಿನ ವಿವರಗಳನ್ನು ಭದ್ರತಾ ಪಡೆಗಳು ಇನ್ನಷ್ಟೇ ಬಹಿರಂಗಪಡಿಸಬೇಕಾಗಿವೆ.
ಸ್ಪೋಟಕ ಇದೆ ಎಂಬ ಸುಳಿವು ಸಿಗುತ್ತಿದ್ದಂತೆ ಸೇನೆಯ ಗುಪ್ತಚರ ದಳ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಸ್ಥಳದಲ್ಲಿ ಶೋಧ ನಡೆಸಿ ಸ್ಥಳೀಯವಾಗಿ ತಯಾರಿಸಿದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಬಾಲಾಕೋಟ್ನಲ್ಲಿ ಭಯೋತ್ಪಾದಕ ಶಿಬಿರಗಳನ್ನು ಪಾಕಿಸ್ಥಾನ ಪುನಃ ಸಕ್ರಿಯಗೊಳಿಸಿದೆ, 500 ಕ್ಕೂ ಹೆಚ್ಚು ಭಯೋತ್ಪಾದಕರು ಗಡಿಯಿಂದ ಒಳನುಸುಳಲು ಕಾಯುತ್ತಿದ್ದಾರೆ ಎಂದಿದ್ದರು. ಅವರ ಹೇಳಿಕೆಗೆ ನಿದರ್ಶನ ಎಂಬಂತೆ ಸ್ಪೋಟಕಗಳು ಪತ್ತೆಯಾಗಿವೆ.
ಸಂವಿಧಾನದ 370ವಿಧಿಯನ್ನು ರದ್ದುಪಡಿಸಿದ ಬಳಿಕ ಪಾಕಿಸ್ಥಾನ ಬೆಂಬಲಿತ ಭಯೋತ್ಪಾದಕ ಗುಂಪುಗಳು ಭಾರತದ ವಿರುದ್ಧ ಸಮರವನ್ನು ಸಾರಲು ಹವಣಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.