ಲಕ್ನೋ: ತ್ರಿವಳಿ ತಲಾಖ್ ಸಂತ್ರಸ್ಥರಿಗೆ ಮತ್ತು ವಿಚ್ಛೇದಿತ ಹಿಂದೂ ಮಹಿಳೆಯರಿಗೆ ವಾರ್ಷಿಕ 6 ಸಾವಿರ ರೂಪಾಯಿಗಳ ಸಹಾಯ ಧನವನ್ನು ನೀಡುವುದಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಘೋಷಣೆ ಮಾಡಿದ್ದಾರೆ.
ಅಲ್ಲದೇ ವಿಚ್ಛೇದಿತ ಮಹಿಳೆಯರಿಗೆ ಉಚಿತ ಕಾನೂನು ನೆರವನ್ನು ನೀಡುವುದಾಗಿಯೂ ಅವರು ತಿಳಿಸಿದ್ದಾರೆ.
ಆದಿತ್ಯನಾಥ್ ಅವರು ಬುಧವಾರ, ಪ್ರಧಾನ ಮಂತ್ರಿ ಜನ ವಿಕಾಸ್ ಕಾರ್ಯಕ್ರಮ (ಪಿಎಂಜೆವಿಕೆ) ಅಡಿಯಲ್ಲಿ ತ್ರಿವಳಿ ತಲಾಖ್ ಸಂತ್ರಸ್ಥರೊಂದಿಗೆ ಸಂವಾದ ನಡೆಸಿದರು ಮತ್ತು ಅಂತಹ ಮಹಿಳೆಯರಿಗೆ ವಕ್ಫ್ ಆಸ್ತಿಗಳ ಮೇಲೆ ಹಕ್ಕುಗಳನ್ನು ನೀಡಬೇಕು ಎಂದು ಸೂಚಿಸಿದರು. ಅವರ ಪುನರ್ವಸತಿಗಾಗಿ ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತದ ಸುಮಾರು 300 ಮಹಿಳೆಯರು ಭಾಗವಹಿಸಿದ್ದರು.
“ವಿದ್ಯಾವಂತ ಮಹಿಳೆಯರನ್ನು ಅವರ ಅರ್ಹತೆಗಳಿಗೆ ಅನುಗುಣವಾಗಿ ಸರ್ಕಾರಿ ಉದ್ಯೋಗಗಳಲ್ಲಿ ಸೇರಿಸಿಕೊಳ್ಳಬೇಕು ಮತ್ತು ವಿವಿಧ ಯೋಜನೆಗಳ ಅಡಿಯಲ್ಲಿ ಅವರಿಗೆ ಆಶ್ರಯ ಮತ್ತು ಶಿಕ್ಷಣವನ್ನು ಒದಗಿಸಲು ಸಹ ವ್ಯವಸ್ಥೆ ಮಾಡಬೇಕು. ಈ ಮಹಿಳೆಯರನ್ನು ಆಯುಷ್ಮಾನ್ ಭಾರತ ಯೋಜನೆ ಅಥವಾ ಮುಖ್ಯಮಂತ್ರಿ ಆರೋಗ್ಯ ಯೋಜನೆಯಡಿ ಒಳಪಡಿಸಬೇಕು” ಎಂದು ಅಧಿಕಾರಿಗಳಿಗೆ ಅವರು ಸೂಚನೆಯನ್ನು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.