ಅಹ್ಮದಾಬಾದ್: ಅಕ್ಟೋಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಅಹ್ಮದಾಬಾದ್ನಿಂದ ದೇಶವನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಲಿದ್ದಾರೆ ಎಂದು ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಬುಧವಾರ ಹೇಳಿದ್ದಾರೆ.
ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯನ್ನು ಆಚರಿಸಲು ನಗರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಸಬರಮತಿ ರಿವರ್ಫ್ರಂಟ್ನಿಂದ ಭಾರತವನ್ನು ಬಯಲು ಶೌಚಮುಕ್ತ ಎಂದು ಘೋಷಣೆ ಮಾಡಲಿದ್ದಾರೆ ಎಂದು ಗಾಂಧಿನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವೇಳೆ ಪಟೇಲ್ ತಿಳಿಸಿದ್ದಾರೆ.
“ಈ ವೇಳೆ 20,000 ಕ್ಕೂ ಹೆಚ್ಚು ಸರಪಂಚರುಗಳ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರಲ್ಲಿ 10,000 ಜನರು ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಪಂಜಾಬ್, ಹರಿಯಾಣ, ಬಿಹಾರ ಮತ್ತು ಇತರ ಹಲವು ರಾಜ್ಯಗಳಿಂದ ಬರಲಿದ್ದಾರೆ. ಉಳಿದ 10,000 ಮಂದಿ ಕೇಂದ್ರಾಡಳಿತ ಪ್ರದೇಶಗಳಿಂದ ಬರಲಿದ್ದಾರೆ” ಎಂದಿದ್ದಾರೆ.
ಈ ಕಾರ್ಯಕ್ರಮಕ್ಕೆ ಹಾಜರಾಗುವವರಲ್ಲಿ 60% ಕ್ಕೂ ಹೆಚ್ಚು ಮಹಿಳೆಯರು ಇರಲಿದ್ದಾರೆ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ. “ವಿವಿಧ ರಾಜ್ಯಗಳ 10,000 ಸರಪಂಚರುಗಳನ್ನು ಅಹಮದಾಬಾದ್, ಸೂರತ್, ವಡೋದರಾ ಮತ್ತು ಮೆಹ್ಸಾನಾ ಎಂದು ನಾಲ್ಕು ವಲಯಗಳಾಗಿ ವಿಂಗಡಿಸಲಾಗುವುದು ಮತ್ತು ಗಾಂಧಿ ಆಶ್ರಮ, ದಾಂಡಿ ಕುಟೀರ್ ಮುಂತಾದ ಮಹಾತ್ಮನನ್ನು ನೆನಪಿಸುವ ಹಲವಾರು ಸ್ಥಳಗಳಿಗೆ ಅವರನ್ನು ಕರೆದುಕೊಂಡು ಹೋಗಲಾಗುವುದು. 400 ಕ್ಕೂ ಹೆಚ್ಚು ಬಸ್ಗಳನ್ನು ಇವರಿಗಾಗಿ ವ್ಯವಸ್ಥೆ ಮಾಡಲಾಗಿದೆ” ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.