ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಇರಾನಿನ ಅಧ್ಯಕ್ಷ ಹಸನ್ ರೌಹಾನಿ ಅವರು ನ್ಯೂಯಾರ್ಕ್ನಲ್ಲಿ ಗುರುವಾರ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದರು ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಸಂಸರ್ಭದಲ್ಲಿ ಇಬ್ಬರು ಮುಖಂಡರ ನಡುವೆ ಚರ್ಚೆ ನಡೆದಿದೆ.
ಅಧಿಕೃತ ಪತ್ರಿಕಾ ಪ್ರಕಟಣೆಯ ಪ್ರಕಾರ, ಭಾರತಕ್ಕೆ ಅತೀ ಪ್ರಮುಖವಾಗಿರುವ ಗಲ್ಫ್ ಪ್ರದೇಶದ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ರಾಜತಾಂತ್ರಿಕತೆ, ಸಂವಾದ ಮತ್ತು ವಿಶ್ವಾಸ ವೃದ್ಧಿಗೆ ಆದ್ಯತೆ ನೀಡಲು ಭಾರತ ಬೆಂಬಲವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿಯವರು ರೌಹಾನಿ ಅವರೊಂದಿಗಿನ ಮಾತುಕತೆಯ ವೇಳೆ ಪುನರುಚ್ಚರಿಸಿದ್ದಾರೆ.
ಭಾರತ ಮತ್ತು ಇರಾನ್ ಹಳೆಯ ಮತ್ತು ನಾಗರಿಕ ಬಾಂಧವ್ಯಗಳನ್ನು ಹಂಚಿಕೊಳ್ಳುತ್ತವೆ ಎಂಬುದನ್ನು ಉಲ್ಲೇಖಿಸಿದ ಮುಖಂಡರುಗಳು, 2015ರಲ್ಲಿ ರಷ್ಯಾದ ಉಫ ನಗರದಲ್ಲಿ ನಡೆದ ಮೊದಲ ಸಭೆಯ ಬಳಿಕ ಉಭಯ ದೇಶಗಳ ನಡುವಣ ಸಂಬಂಧವು ವೃದ್ಧಿಯಾಗಿದೆ ಎಂಬುದನ್ನು ಗಮನಿಸಿದರು.
ವಿಶೇಷವಾಗಿ ಚಬಹಾರ್ ಬಂದರಿನ ಬಂಡವಾಳದ ಬಗ್ಗೆ ಪ್ರಸ್ತಾಪಿಸಿದ್ದಾರೆ ಮತ್ತು ಅಫ್ಘಾನಿಸ್ತಾನ ಮತ್ತು ಮಧ್ಯ ಏಷ್ಯಾ ಪ್ರದೇಶಕ್ಕೆ ಹೆಬ್ಬಾಗಿಲಾಗಿರುವ ಅದರ ಮಹತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ,.
ಸಭೆಯಲ್ಲಿ, 2020 ರಲ್ಲಿ ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70 ನೇ ವಾರ್ಷಿಕೋತ್ಸವವನ್ನು ಆಚರಿಸಲು ಸಮ್ಮತಿಸಲಾಯಿತು.
ಅಮೆರಿಕಾ ಮತ್ತು ಇರಾನ್ ನಡುವೆ ಬಿಕ್ಕಟ್ಟು ಉದ್ಭವಿಸಿರುವ ಸಂದರ್ಭದಲ್ಲಿ ಭಾರತ ಮತ್ತು ಇರಾನ್ ಮುಖಂಡರುಗಳ ನಡುವಿನ ಮಾತುಕತೆಯು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.