ನವದೆಹಲಿ: ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ತಲಾ ಒಂದು ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗವು ಉಪಚುನಾವಣೆ ಪ್ರಕಟಿಸಿದೆ. ಅಕ್ಟೋಬರ್ 16 ರಂದು ಎರಡು ಸ್ಥಾನಗಳಿಗೆ ಮತದಾನ ನಡೆಯಲಿದೆ.
ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪಚನಾವಣೆ ಜರುಗಲಿದೆ. ಅವರು ಉತ್ತರಪ್ರದೇಶದಿಂದ 2018ರಲ್ಲಿ ರಾಜ್ಯಸಭಾ ಸದಸ್ಯರಾಗಿ ಮರು ಆಯ್ಕೆಯಾಗಿದ್ದರು.
ಆರ್ಜೆಡಿ ಸಂಸದ ಮತ್ತು ಹಿರಿಯ ವಕೀಲ ರಾಮ್ ಜೆಠ್ಮಲಾನಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಜೇಠ್ಮಲಾನಿ ಬಿಹಾರದ ರಾಜ್ಯಸಭಾ ಸಂಸದರಾಗಿದ್ದರು.
ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಅಕ್ಟೋಬರ್ 9, ಅಕ್ಟೋಬರ್ 16ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.