ಮಂಗಳೂರು: ದಸರಾ ಹಬ್ಬ ಆಗಮಿಸಿದೆ. ಇದೇ ಸಂದರ್ಭದಲ್ಲಿ ದೇವಾಲಯಗಳಲ್ಲಿ ಅಡುಗೆ, ಪ್ರಸಾದ ತಯಾರಿಸುವ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲೇಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಎಲ್ಲಾ ದೇವಸ್ಥಾನಗಳಿಗೂ ಆದೇಶವನ್ನು ಹೊರಡಿಸಿದ್ದಾರೆ. ದೇಗುಲದಲ್ಲಿ ಅನಾಹುತ ನಡೆಯವುದನ್ನು ತಪ್ಪಿಸುವ ಉದ್ದೇಶದಿಂದ ಈ ನಿರ್ದೇಶನವನ್ನು ನೀಡಿದ್ದಾರೆ.
ಕಳೆದ ವರ್ಷ ಚಾಮರಾಜನಗರದ ಸುಳ್ವಾಡಿಯ ದೇವಾಲಯವೊಂದರಲ್ಲಿ ದುರ್ಷರ್ಮಿಗಳು ಪ್ರಸಾದಕ್ಕೆ ವಿಷ ಬೆರೆಸಿದ ಕಾರಣದಿಂದಾಗಿ 15 ಮಂದಿ ಅಸುನೀಗಿದ್ದರು. ಆ ಬಳಿಕದಿಂದ ಸರ್ಕಾರ ದೇಗುಲದ ಅಡುಗೆ ತಯಾರಿಸುವ ಜಾಗದಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಸೂಚನೆಯನ್ನು ನೀಡಿತ್ತು. ಇದೀಗ ಮುಜರಾಯಿ ಸಚಿವರು ಸಿಸಿಟಿವಿ ಅಳವಡಿಕೆಯನ್ನು ಕಡ್ಡಾಯವಾಗಿ ಮಾಡುವಂತೆ ದೇಗುಲಗಳಿಗೆ ನಿರ್ದೇಶನ ನೀಡಿದ್ದಾರೆ.
ಶುಕ್ರವಾರ ಮಂಗಳೂರು ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ ಪೂಜಾರಿಯವರು ದಸರಾ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು ಮತ್ತು ದಸರಾ ಆಚರಣೆಗೆ ಸರ್ಕಾರದ ವತಿಯಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವುದಾಗಿ ಭರವಸೆಯನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಉಪ ಆಯುಕ್ತೆ ಸಿಂಧು ರೂಪೇಶ್ ಅವರು ದಸರಾದ ವೇಳೆ ಏಕ ಬಳಕೆ ಪ್ಲಾಸ್ಟಿಕ್ಅನ್ನು ಬಳಕೆ ಮಾಡದಂತೆ ದೇಗುಲ ಮಂಡಳಿಗಳನ್ನು ಕೋರಿದ್ದಾರೆ.
“ದೇಗುಲಗಳು ಪ್ರಸಾದ ವಿತರಣೆಗೆ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಏಕ ಬಳಕೆ ಪ್ಲಾಸ್ಟಿಕ್ ಬಳಕೆಯಿಂದ ದೂರವಿರಬೇಕು, ಈ ನಿಟ್ಟಿನಲ್ಲಿ ದೇಗುಲ ಮಂಡಳಿಗಳು ಸೂಕ್ತ ಕ್ರಮ ಜರುಗಿಸಬೇಕು” ಎಂದು ಅವರು ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.