ನವದೆಹಲಿ: ಪಾಕಿಸ್ಥಾನದ ಗಡಿಯೊಳಗೆ ನುಗ್ಗಿ ಉಗ್ರರನ್ನು ದಮನಿಸಿದ ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ಗೆ ಇಂದಿಗೆ ಮೂರು ವರ್ಷಗಳು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನಕ್ಕೆ ಮತ್ತು ಇಡೀ ಜಗತ್ತಿಗೆ ಭಾರತ ಮತ್ತು ಭಾರತೀಯ ಸೇನೆಯ ಶೌರ್ಯ ಎಂತಹುದು ಎಂಬುದು ಈ ದಾಳಿಯಿಂದ ದೃಢಪಟ್ಟಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಯು ನಡೆಸಿದ ರೋಚಕ ಸರ್ಜಿಕಲ್ ಸ್ಟ್ರೈಕ್ ದಾಳಿಯನ್ನು ಸ್ಮರಿಸಿಕೊಂಡಿದ್ದಾರೆ.
ಒಂದು ವಾರಗಳ ಅಮೆರಿಕ ಪ್ರವಾಸವನ್ನು ಮುಗಿಸಿ ಶನಿವಾರ ದೆಹಲಿಯ ಪಲಾಮ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ಈ ವೇಳೆ ತಮ್ಮನ್ನು ಸ್ವಾಗತಿಸಲು ನೆರೆದಿದ್ದ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವಿಷಯವನ್ನು ಪ್ರಸ್ತಾಪ ಮಾಡಿದ್ದಾರೆ.
ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಉಗ್ರರನ್ನು ಸರ್ಜಿಕಲ್ ಸ್ಟ್ರೈಕ್ ಮೂಲಕ ಭಾರತೀಯ ಸೇನೆಯ ಹೊಡೆದುರುಳಿಸಿದ ಬಗ್ಗೆ ಉಲ್ಲೇಖಿಸಿದ ಅವರು, ಭಾರತೀಯ ಸೇನೆಯ ಶೌರ್ಯವನ್ನು ಕೊಂಡಾಡಿದರು.
“3 ವರ್ಷಗಳ ಹಿಂದೆ ಸೆಪ್ಟೆಂಬರ್ 28ರ ರಾತ್ರಿ ನಮ್ಮ ದೇಶದ ವೀರ ಯೋಧರು ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ದೇಶದ ಘನತೆಯನ್ನು ಎತ್ತಿಹಿಡಿದರು. ಆ ರಾತ್ರಿಯನ್ನು ಸ್ಮರಿಸುತ್ತಾ ನಾನು ನಮ್ಮ ವೀರ ಯೋಧರಿಗೆ ಸೆಲ್ಯೂಟ್ ಮಾಡಲು ಬಯಸುತ್ತೇನೆ” ಎಂದಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ನಡೆದ ರೋಚಕ ರಾತ್ರಿಯಲ್ಲಿ ನಾನು ಮಲಗಿರಲಿಲ್ಲ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.
ಜಮ್ಮು-ಕಾಶ್ಮೀರದ ಉರಿ ಮೇಲೆ ನಡೆದಿದ್ದ ಉಗ್ರರದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯ 2016ರ ಸೆಪ್ಟೆಂಬರ್ 28 ರಾತ್ರಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.