ನವದೆಹಲಿ : ಇಂಡಿಯನ್ ಎಕ್ಸ್ಪ್ರೆಸ್ನ 2019ರ ಅತೀ ಪ್ರಭಾವಿ ಭಾರತೀಯ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಗ್ರ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, 3ನೇ ಸ್ಥಾನವನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಪಡೆದುಕೊಂಡಿದ್ದಾರೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗತ್ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ರಿಲಾಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
303 ಸ್ಥಾನಗಳೊಂದಿಗೆ ಭಾರೀ ಜನಾದೇಶದೊಂದಿಗೆ ಬಿಜೆಪಿಯು ಎರಡನೇ ಬಾರಿಗೆ ದೇಶದಲ್ಲಿ ಆಡಳಿತ ಚುಕ್ಕಾಣಿಯನ್ನು ಹಿಡಿದಿದೆ. ಭಾರತ ಪ್ರಭಾವಿಗಳ ಪಟ್ಟಿಯಲ್ಲೂ ಬಿಜೆಪಿಯವರೇ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. ಆರ್ಎಸ್ಎಸ್ ನಾಯಕರುಗಳೂ ಅತ್ಯಂತ ಪ್ರಭಾವಿಗಳಾಗಿ ಹೊರಹೊಮ್ಮಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್, ಮುಕೇಶ್ ಅಂಬಾನಿ, ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಹೊರತುಪಡಿಸಿ ಟಾಪ್ 20ರಲ್ಲಿ ಸ್ಥಾನ ಪಡೆದ ಉಳಿದೆಲ್ಲರೂ ಬಿಜೆಪಿ ಮತ್ತು ಆರ್ಎಸ್ಎಸ್ನವರಾಗಿದ್ದಾರೆ.
ಪಟ್ಟಿಯ 6ನೇ ಸ್ಥಾನದಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಇದ್ದಾರೆ, 7ನೇ ಸ್ಥಾನದಲ್ಲಿ ಅಜಿತ್ ದೋವಲ್ ಇದ್ದಾರೆ. 8ನೇ ಸ್ಥಾನದಲ್ಲಿ ನಿರ್ಮಲಾ ಸೀತಾರಾಮನ್, 9ನೇ ಸ್ಥಾನದಲ್ಲಿ ನಿತಿನ್ ಗಡ್ಕರಿ, 10ನೇ ಸ್ಥಾನದಲ್ಲಿ ಜೆಪಿ ನಡ್ಡಾ ಇದ್ದಾರೆ. 11ನೇ ಸ್ಥಾನದಲ್ಲಿ ಯೋಗಿ ಆದಿತ್ಯನಾಥ, 12ನೇ ಸ್ಥಾನದಲ್ಲಿ ದೇವೇಂದ್ರ ಫಡ್ನವಿಸ್ , 13ನೇ ಸ್ಥಾನದಲ್ಲಿ ಪಿಯೂಶ್ ಗೋಯಲ್, 14ನೇ ಸ್ಥಾನದಲ್ಲಿ ಧರ್ಮೇಂದ್ರ ಪ್ರಧಾನ್, 15ನೇ ಸ್ಥಾನದಲ್ಲಿ ಅಮರೀಂದರ್ ಸಿಂಗ್, 16ನೇ ಸ್ಥಾನದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, 17ನೇ ಸ್ಥಾನದಲ್ಲಿ ಸೋನಿಯಾ ಗಾಂಧಿ, 18ನೇ ಸ್ಥಾನದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, 19ನೇ ಸ್ಥಾನದಲ್ಲಿ ಮೋದಿಯ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ, 20ನೇ ಸ್ಥಾನದಲ್ಲಿ ರವಿ ಶಂಕರ್ ಪ್ರಸಾದ್ ಇದ್ದಾರೆ.
ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು 21ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶಿವಸೇನೆಯ ಉದ್ಧವ್ ಠಾಕ್ರೆ 24ನೇ ಸ್ಥಾನದಲ್ಲಿದ್ದಾರೆ. ರಾಹುಲ್ ಗಾಂಧಿ 25ನೇ ಸ್ಥಾನದಲ್ಲಿದ್ದಾರೆ. ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ 29ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
100 ಮಂದಿ ಪ್ರಭಾವಿಗಳ ಪಟ್ಟಿಯನ್ನು ಇಂಡಿಯನ್ ಎಕ್ಸ್ಪ್ರೆಸ್ ಬಿಡುಗಡೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.