ಹೈದರಾಬಾದ್: ಕೇಂದ್ರ ಸರಕಾರವು 2017ರ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಿದ ಸೌಭಾಗ್ಯ ಯೋಜನೆಯಡಿ ತನ್ನ ರಾಜ್ಯದ 5.15 ಲಕ್ಷ ಮನೆಗಳಿಗೆ ವಿದ್ಯುತ್ತನ್ನು ಒದಗಿಸಿರುವ ತೆಲಂಗಾಣ ರಾಜ್ಯವು ದೇಶದ ಸಂಪೂರ್ಣ ವಿದ್ಯುದೀಕರಣಗೊಂಡ ರಾಜ್ಯವಾಗಿ ಹೊರಹೊಮ್ಮಿದೆ.
ತೆಲಂಗಾಣ ಅದರಲ್ಲೂ ಮುಖ್ಯವಾಗಿ ಅತಿ ದೂರ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ 5 ಲಕ್ಷ ಮನೆಗಳಿಗೆ ವಿದ್ಯುತ್ತನ್ನು ಒದಗಿಸಲಾಗಿದೆ. ಈ ಮೂಲಕ ಅಲ್ಲಿ ಶೇ.100ರಷ್ಟು ವಿದ್ಯುದೀಕರಣ ವನ್ನು ಸಾಧಿಸಲಾಗಿದೆ.
ವಿದ್ಯುತ್ ಇಲ್ಲದ ಮನೆಗಳಿಗೆ ವಿದ್ಯುತ್ತನ್ನು ಒದಗಿಸಲಾಗಿದೆ ಮತ್ತು ದುರ್ಬಲ ವರ್ಗದ ಜನರಿಗಾಗಿ ಕೇವಲ 500 ರೂಪಾಯಿಯಲ್ಲಿ ಸಂಪರ್ಕವನ್ನು ಒದಗಿಸುವ 10 ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಗ್ರಾಮೀಣ ವಿದ್ಯುದೀಕರಣ ಕಾರ್ಪೋರೇಶನ್ ಹೇಳಿದೆ.
ರಾಜ್ಯವನ್ನು ಸಂಪೂರ್ಣ ವಿದ್ಯುದೀಕರಣಗೊಳಿಸಲು ಅಧಿಕಾರಿಗಳು ತೆಗೆದುಕೊಂಡ ಕ್ರಮಗಳು ಫಲವನ್ನು ನೀಡಿದೆ. 4.52 ಲಕ್ಷ ಮನೆಗಳಿಗೆ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಲಾಗಿತ್ತು ಆದರೆ ಅದಕ್ಕೂ ಮೀರಿದ ಸಾಧನೆಯನ್ನು ಮಾಡಲಾಗಿದೆ. ಮೆಹಬೂಬ ನಗರದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಅಂದರೆ 1.6 ಲಕ್ಷ ಮನೆಗಳಿಗೆ ವಿದ್ಯುತ್ತನ್ನು ಒದಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.