ನವದೆಹಲಿ : ದೇಶದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟ ಹಿನ್ನೆಲೆಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಪಟೇಲ್ ಆವರು ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯಂದು ಐತಿಹಾಸಿಕ ಸ್ಮಾರಕಗಳ ಆವರಣದಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ 100 ಮೀಟರ್ ಒಳಗಿನ ಪ್ರದೇಶದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಅನುಮತಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಮಹಾತ್ಮ ಗಾಂಧಿಯವರ 150ನೇ ಜಯಂತಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ಕಠಿಣ ಕ್ರಮ ತೆಗೆದುಕೊಂಡ ಬೆನ್ನಲ್ಲೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಈ ನಿರ್ಧಾರವನ್ನು ಪ್ರಕಟಿಸಿದೆ.
ದೇಶದಾದ್ಯಂತ ಅಕ್ಟೋಬರ್ 2 ರಿಂದ 13 ರ ವರೆಗೆ ನಡೆಯಲಿರುವ ಪರ್ಯಟನ್ ಪರ್ವ ಎಂಬ ಪ್ರವಾಸೋದ್ಯಮ ಮೇಳವನ್ನು ನವದೆಹಲಿಯಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಪಟೇಲ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಈ ಸಂದರ್ಭ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಕಾಶ್ ಜಾವ್ಡೇಕರ್ ಉಪಸ್ಥಿತರಿದ್ದರು.
ದೇಶದಾದ್ಯಂತ ಇರುವ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿರುವ ತಾಣಗಳಿಗೆ ಭೇಟಿ ನೀಡಿ ಪ್ರವಾಸೋದ್ಯಮವನ್ನು ಉತ್ತೇಜಿಸುವಂತೆ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.