ಮುಂಬಯಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಿರ್ಧಾರಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಂಗಳವಾರ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಶ್ಲಾಘಿಸಿದರು.
ವಾರ್ಷಿಕ ದಸರಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾ ಅವರು ಮಾತಿಗೆ ತಕ್ಕಂತೆ ಬದುಕುವ ವ್ಯಕ್ತಿ ಎಂದು ಬಣ್ಣಿಸಿದರು ಮತ್ತು 370 ನೇ ವಿಧಿಯನ್ನು ರದ್ದುಗೊಳಿಸುವುದು ಪಕ್ಷದ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಕನಸಾಗಿತ್ತು ಎಂದು ಹೇಳಿಕೊಂಡಿದ್ದಾರೆ.
“ಅಮಿತ್ ಶಾ ಅವರು ಹೇಳುವುದನ್ನು ಮಾಡುತ್ತಾರೆ. 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ, ಬಾಳಾಸಾಹೇಬ್ ಠಾಕ್ರೆ ಅವರ ಕನಸು ಈಡೇರಿದೆ. ಈಗ ನಮಗೆ ಏಕರೂಪದ ನಾಗರಿಕ ಸಂಹಿತೆ ಬೇಕು” ಎಂದು ಠಾಕ್ರೆ ಹೇಳಿದ್ದಾರೆ.
ದಸರಾ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ ಅವರು, “ರಾಮ ರಾವಣನನ್ನು ಕೊಂದ ದ್ಯೋತಕವಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಇದರರ್ಥ ಭಗವಾನ್ ರಾಮ ಅಸ್ತಿತ್ವದಲ್ಲಿದ್ದ ಎಂಬುದು. ಹೀಗಾಗಿ ಭಗವಾನ್ ರಾಮನ ದೇವಾಲಯವು ಅವನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ನಿರ್ಮಾಣವಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ನಾವು ದೇವಾಲಯದ ಹೆಸರಿನಲ್ಲಿ ಮತಗಳನ್ನು ಕೇಳುವುದಿಲ್ಲ, ಆದರೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗಬೇಕು ಎಂಬುದು ಎಲ್ಲಾ ದೇಶವಾಸಿಗಳ ಮತ್ತು ಹಿಂದೂಗಳ ಬಯಕೆಯಾಗಿದೆ”ಎಂದಿದ್ದಾರೆ.
ಬಿಜೆಪಿ ಮತ್ತು ಶಿವಸೇನಾದ ನಡುವಣ ಮೈತ್ರಿ ಹಿಂದುತ್ವಕ್ಕಾಗಿ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.