ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಅಕ್ಟೋಬರ್ 11 ರಿಂದ 12 ರವರೆಗೆ ಭಾರತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ. ಈ ವೇಳೆ ಅವರು ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನಡೆಯಲಿರುವ 2ನೇ ಅನೌಪಚಾರಿಕ ಭಾರತ-ಚೀನಾ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.
“ಪ್ರಧಾನಮಂತ್ರಿಯವರ ಆಹ್ವಾನದ ಮೇರೆಗೆ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಅಕ್ಟೋಬರ್ 11-12 ರಿಂದ ಭಾರತದ ಚೆನ್ನೈಗೆ ಭೇಟಿ ನೀಡಲಿದ್ದಾರೆ ಮತ್ತು 2 ನೇ ಅನೌಪಚಾರಿಕ ಶೃಂಗಸಭೆ 2019 ರಲ್ಲಿ ಭಾಗಿಯಾಗಲಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಿದೆ.
“ಮುಂಬರುವ ಚೆನ್ನೈ ಅನೌಪಚಾರಿಕ ಶೃಂಗಸಭೆಯ ವೇಳೆ ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಭಾರತ-ಚೀನಾದ ನಿಕಟ ಅಭಿವೃದ್ಧಿ ಪಾಲುದಾರಿಕೆಯನ್ನು ಇನ್ನಷ್ಟು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ವಿಚಾರ ವಿನಿಮಯಗಳನ್ನು ಮಾಡಿಕೊಳ್ಳಲಿದ್ದಾರೆ” ಎಂದು ಪ್ರಕಟನೆ ತಿಳಿಸಿದೆ.
ಭಾರತದಲ್ಲಿರುವ ಚೀನಾದ ರಾಯಭಾರಿ ಸನ್ ವೀಡಾಂಗ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿ, “ನಮ್ಮ ನಾಯಕರ ಕಾರ್ಯತಂತ್ರದ ಮಾರ್ಗದರ್ಶನದಡಿಯಲ್ಲಿ ಚೀನಾ-ಭಾರತ ಸಂಬಂಧಗಳು ಇತ್ತೀಚಿನ ದಿನಗಳಲ್ಲಿ ಸ್ಥಿರವಾದ ಪ್ರಗತಿಯನ್ನು ಸಾಧಿಸಿವೆ. ನಾವು ಅನೌಪಚಾರಿಕ ಶೃಂಗಸಭೆಯ ಸಕಾರಾತ್ಮಕ ಪರಿಣಾಮವನ್ನು ಮತ್ತಷ್ಟು ಪಸರಿಸಬೇಕು, ನಾಯಕರ ಒಮ್ಮತಗಳು ಎಲ್ಲಾ ಹಂತಗಳಿಗೂ ಮತ್ತು ಬಲವಾದ ದ್ವಿಪಕ್ಷೀಯ ಸಂಬಂಧಗಳಿಗೂ ಸಕಾರಾತ್ಮಕ ಶಕ್ತಿಯನ್ನು ನೀಡುತ್ತದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.