ನವದೆಹಲಿ : ಜಾಗತಿಕ ಭಯೋತ್ಪಾದನಾ ವಿರೋಧಿ ಹಣಕಾಸು ಸಂಸ್ಥೆ ಫಿನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ಅಥವಾ FATF ಭಾನುವಾರ ಪ್ಯಾರಿಸ್ನಲ್ಲಿ ಮಹತ್ವದ ಸಭೆಯನ್ನು ನಡೆಸುತ್ತಿದೆ. ಈ ಸಭೆಯಲ್ಲಿ ಪಾಕಿಸ್ಥಾನವನ್ನು ಕಪ್ಪುಪಟ್ಟಿಗೆ ಸೇರಿಸಬೇಕೇ ಅಥವಾ ಗ್ರೇ ಪಟ್ಟಿಯಿಂದ ತೆಗೆಯಬೇಕೇ ಎಂಬ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ.
FATF ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪಾಕಿಸ್ಥಾನದ ಆರ್ಥಿಕ ವ್ಯವಹಾರಗಳ ಸಚಿವ ಹಮ್ಮದ್ ಅಝರ್ ಅವರ ನೇತೃತ್ವದ ಐವರು ಪಾಕಿಸ್ಥಾನೀಯರ ನಿಯೋಗ ಪ್ಯಾರಿಸ್ಗೆ ಪ್ರಯಾಣಿಸಿದೆ.
FATF ತಾಂತ್ರಿಕ ಸಂಸ್ಥೆಯಾಗಿದ್ದು, ಅಂತಾರಾಷ್ಟ್ರೀಯ ಹಣಕಾಸು ವ್ಯವಸ್ಥೆಯನ್ನು ರಕ್ಷಣೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ ಮತ್ತು ತನ್ನ ಸದಸ್ಯ ರಾಷ್ಟ್ರಗಳ ಕಾಳಜಿಯನ್ನು ಕಾಪಾಡುವುದು 30 ವರ್ಷದ ಸಂಸ್ಥೆಯ ಗುರಿಯಾಗಿದೆ.
ಭಯೋತ್ಪಾದನೆಗೆ ಹಣಕಾಸು ನೆರವು ನೀಡುತ್ತಿರುವ ಪಾಕಿಸ್ಥಾನವನ್ನು ಕಳೆದ ವರ್ಷ FATF ಗ್ರೇ ಪಟ್ಟಿಯಲ್ಲಿ ಇಟ್ಟಿತ್ತು. ಇದರಿಂದಾಗಿ ಪಾಕಿಸ್ಥಾನದ ಆರ್ಥಿಕತೆಗೆ ವಾರ್ಷಿಕ 10 ಬಿಲಿಯನ್ ಡಾಲರ್ ನಷ್ಟವಾಗಿತ್ತು. ಒಂದು ವೇಳೆ ಅದನ್ನು ಗ್ರೇ ಪಟ್ಟಿಯಿಂದ ಕಪ್ಪುಪಟ್ಟಿಗೆ ವರ್ಗಾಯಿಸಿದರೆ ಪಾಕಿಸ್ಥಾನದ ಆರ್ಥಿಕ ಪರಿಸ್ಥಿತಿ ಇನ್ನಷ್ಟು ಶೋಚನೀಯ ಸ್ಥಿತಿಗೆ ತಲುಪಲಿದೆ. ಯಾರೊಬ್ಬರು ಅಲ್ಲಿ ಹೂಡಿಕೆ ಮಾಡಲು ಮುಂದಾಗುವುದಿಲ್ಲ.
ಪಾಕಿಸ್ಥಾನ ಭಯೋತ್ಪಾದನಾ ಸಂಘಟನೆಗಳಿಗೆ ಹಣಕಾಸು ನೆರವು ಹರಿದು ಬರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಈಗಾಗಲೇ ಹಲವು ಬಾರಿ FATF ಅಸಮಾಧಾನವನ್ನು ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.