ಕಾನ್ಪುರ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, ಕಾಶ್ಮೀರದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಸದಸ್ಯರಾಗಲು ಸ್ವಾಭಿಮಾನ ಇದ್ದವರು ಮುಂದಾಗುವುದಿಲ್ಲ ಎಂದು ಹೇಳಿದ್ದಾರೆ.
ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರತಾಪಗಢದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಕಾಂಗ್ರೆಸ್ ಮತ್ತು ಪಾಕಿಸ್ಥಾನ ಅತೀವ ನೋವಿಗೆ ಒಳಗಾಗಿದೆ ಎಂದಿದ್ದಾರೆ.
ಕಾಶ್ಮೀರದಲ್ಲಿ ಪಾಕಿಸ್ಥಾನ ಪ್ರಾಯೋಜಿತ ಭಯೋತ್ಪಾದನೆಯಿಂದಾಗಿ 41 ಸಾವಿರ ನಾಗರಿಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆದರೆ ಸಮಾಜವಾದಿ, ಬಹುಜನ ಸಮಾಜವಾದಿ, ಕಾಂಗ್ರೆಸ್ ಪಕ್ಷಗಳು ಈ ವಿಷಯದಲ್ಲಿ ಏನನ್ನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರಕಾರವು 370ನೇ ವಿಧಿಯನ್ನು ರದ್ದುಪಡಿಸಿ ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ದಾರಿಮಾಡಿಕೊಟ್ಟಿತು. ಆದರೆ ಕಾಂಗ್ರೆಸ್ ಈ ನಿರ್ಧಾರವನ್ನು ಟೀಕಿಸಿದ್ದು ದುರದೃಷ್ಟಕರ ಎಂದಿದ್ದಾರೆ.
ಅಕ್ಟೋಬರ್ 21ರಂದು ಉತ್ತರಪ್ರದೇಶದಲ್ಲಿ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಅವರು ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.