ಮುಂಬಯಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯು ಅಕ್ಟೋಬರ್ 21ರಂದು ಏಕ ಹಂತದಲ್ಲಿ ಜರುಗಲಿದೆ. ಭಾರತೀಯ ಜನತಾ ಪಕ್ಷವು ಎರಡೂ ರಾಜ್ಯಗಳಲ್ಲೂ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವನ್ನು ಹೊಂದಿದೆ. ಕಾಂಗ್ರೆಸ್, ಶರದ್ ಪವರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ), ದುಶ್ಯಂತ್ ಚೌತಾಲ ಅವರ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಇತರರು ಹೇಗೆ ಈ ಚುನಾವಣೆಯಲ್ಲಿ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಎಬಿಪಿ ನ್ಯೂಸ್ – ಸಿ ವೋಟರ್ಸ್ ನಡೆಸಿದ ಸಮೀಕ್ಷೆಯ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮೈತ್ರಿಕೂಟ ಸ್ಪಷ್ಟ ಗೆಲುವನ್ನು ಸಾಧಿಸುವ ಮುನ್ಸೂಚನೆಯನ್ನು ನೀಡಿದೆ. ಈ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ 198 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಮತ್ತೊಂದೆಡೆ, ಕಾಂಗ್ರೆಸ್, ಎನ್ಸಿಪಿ ಮೈತ್ರಿ 86 ಸ್ಥಾನಗಳನ್ನು ಪಡೆಯಬಹುದು ಮತ್ತು ಇತರರು ಕೇವಲ 8 ಸ್ಥಾನಗಳಲ್ಲಿ ಜಯ ಗಳಿಸಬಹುದು.
ಹರಿಯಾಣದಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಬಹುಮತ ಪಡೆಯಲು ಸಜ್ಜಾಗಿ ನಿಂತಿದೆ. ಬಿಜೆಪಿ 83 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಕಾಂಗ್ರೆಸ್ ಧೂಳಿಪಟವಾಗಿ, ಕೇವಲ ಮೂರು ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಇತರರು ಕೇವಲ 4 ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಎಬಿಪಿ ನ್ಯೂಸ್ – ಸಿ-ವೋಟರ್ ಭವಿಷ್ಯ ನುಡಿದಿದೆ.
ರಿಪಬ್ಲಿಕ್ ಟಿವಿಯ ಸಮೀಕ್ಷೆಯ ಪ್ರಕಾರ, ಬಿಜೆಪಿ-ಶಿವಸೇನೆ ಒಗ್ಗೂಡಿ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುತ್ತದೆ. ಒಟ್ಟು 90 ಸ್ಥಾನಗಳನ್ನು ಹೊಂದಿರುವ ಹರಿಯಾಣ ವಿಧಾನಸಭೆಯಲ್ಲಿ ಆಡಳಿತಾರೂಢ ಬಿಜೆಪಿ 58-70 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಕಾಂಗ್ರೆಸ್ 12-15 ಸ್ಥಾನಗಳನ್ನು ಗೆಲ್ಲಬಹುದು, ಹೊಸದಾಗಿ ರಚನೆಯಾದ ಜನನಾಯಕ್ ಜನತಾ ಪಕ್ಷ (ಜೆಜೆಪಿ) 5-8 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 142-147 ಸ್ಥಾನಗಳನ್ನು ಗೆಲ್ಲಬಹುದು, ಶಿವಸೇನೆ 83-85 ಸ್ಥಾನಗಳನ್ನು ಪಡೆಯಬಹುದು. ಕಾಂಗ್ರೆಸ್-ಎನ್ಸಿಪಿ ಸಂಯೋಜನೆಯು 48-52 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.
ಒಟ್ಟಿನಲ್ಲಿ ಎಬಿಪಿ ನ್ಯೂಸ್-ಸಿ ವೋಟರ್ಸ್, ರಿಪಬ್ಲಿಕ್ ಟಿವಿ ನಡೆಸಿದ ಸಮೀಕ್ಷೆಗಳು ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ಖಚಿತ ಎನ್ನುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.