ನವದೆಹಲಿ: ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಶುಕ್ರವಾರ ಬೆಂಬಲವನ್ನು ನೀಡಿದೆ, ಈ ಕ್ರಮವು ಹೂಡಿಕೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅದು ಹೇಳಿದೆ.
ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಮತ್ತು ಹಣಕಾಸಿನ ಪರಿಸ್ಥಿತಿಗಳ ದೀರ್ಘಕಾಲೀನ ಸ್ಥಿರತೆಯನ್ನು ಕಾಪಾಡುವಂತೆ ಭಾರತಕ್ಕೆ ಐಎಂಎಫ್ ಕರೆಯನ್ನು ನೀಡಿದೆ.
ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ವರ್ಷದ ಆಗಸ್ಟ್ನಲ್ಲಿ ಕಾರ್ಪೊರೇಟ್ ಆದಾಯ ತೆರಿಗೆಯನ್ನು ಶೇಕಡಾ 25 ಕ್ಕೆ ಇಳಿಸುವುದಾಗಿ ಭರವಸೆ ನೀಡಿದ್ದರು.
ವಿತ್ತೀಯ ನೀತಿ ಉತ್ತೇಜನದೊಂದಿಗೆ ಘೋಷಿತ ಕಾರ್ಪೊರೇಟ್ ತೆರಿಗೆ ಕಡಿತವು ಹೂಡಿಕೆಗಳನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂದು ಐಎಂಎಫ್ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭಾರತವು ಕೆಲಸ ಮಾಡಬೇಕಾದ ಮತ್ತೊಂದು ಆದ್ಯತೆಯ ಕ್ಷೇತ್ರವೆಂದರೆ ಬ್ಯಾಂಕಿಂಗ್ ಅಲ್ಲದ ಹಣಕಾಸು ವಲಯದ ಸಮಸ್ಯೆಗಳು ಎಂದು ಅವರು ಹೇಳಿದ್ದಾರೆ.
“ಮರುಬಂಡವಾಳ ಹೂಡುವ ಪ್ರಯತ್ನಗಳು ಸೇರಿದಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಅನೇಕ ಸುಧಾರಣೆಗಳನ್ನು ಮಾಡಲಾಗಿದ್ದರೂ, ಬ್ಯಾಂಕೇತರ ಹಣಕಾಸು ಸಂಸ್ಥೆಯ ಸಮಸ್ಯೆಗಳು ಭಾಗಶಃ ಬಗೆಹರಿಯದೆ ಉಳಿದಿದೆ ಮತ್ತು ರಿಗ್ಯುಲೇಟರಿ ಇಕ್ವಿಟಿ ಸಾಧಿಸಬೇಕಾದ ವಿಷಯಗಳಲ್ಲಿ ಒಂದಾಗಿದೆ” ಎಂದು ಐಎಂಎಫ್ ಏಷ್ಯಾ ಮತ್ತು ಪೆಸಿಫಿಕ್ ವಿಭಾಗದ ಉಪನಿರ್ದೇಶಕ ಅನ್ನಿ- ಮೇರಿ ಗುಲ್ಡೆ-ವುಲ್ಫ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.