ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಸೇನೆಯು ಇಂದು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ದಾಳಿಯನ್ನು ನಡೆಸಿದ್ದು, ನಾಲ್ಕು ಲಾಂಚ್ ಪ್ಯಾಡ್ಗಳನ್ನು ಧ್ವಂಸ ಮಾಡಿದೆ.
ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ತಂಗ್ದಾರ್ ಸೆಕ್ಟರ್ ಸಮೀಪದ ಉಗ್ರ ಶಿಬಿರಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯಿಂದ ಪಾಕಿಸ್ಥಾನಿಯರಿಗೆ ತೀವ್ರ ಸ್ವರೂಪದಲ್ಲಿ ಹಾನಿಯುಂಟಾಗಿದೆ. ಪಿಓಕೆಯ ನೀಲಂ ಘಾಟ್ ಸಮೀಪದಲ್ಲಿರುವ ಐದು ಉಗ್ರರ ಲಾಂಚ್ ಪ್ಯಾಡ್ಗಳ ಮೇಲೂ ದಾಳಿ ನಡೆಸಲಾಗಿದ್ದು, ಪಾಕಿಸ್ಥಾನ ಸೇನೆಯ 5 ಯೋಧರು, ಜೈಶೇ ಮೊಹಮ್ಮದ್, ಲಷ್ಕರ್ ಸಂಘಟನೆಗಳ ಹಲವಾರು ಉಗ್ರರು ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.
ಕುಪ್ವಾರದ ತಂಗ್ದಾರ್ ಸೆಕ್ಟರ್ ಸಮೀಪ ಪಾಕ್ ಸೇನೆಯು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿ, ಓರ್ವ ನಾಗರಿಕ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಈ ದಾಳಿಯನ್ನು ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.