ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಸ್ ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂ (ಯುಎಸ್ಐಎಸ್ಪಿಎಫ್) ಸದಸ್ಯರನ್ನು ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿಯಾದರು. ಯುಎಸ್ಐಎಸ್ಪಿಎಫ್ ನಿಯೋಗದ ನೇತೃತ್ವವನ್ನು ಅದರ ಅಧ್ಯಕ್ಷ ಜಾನ್ ಚೇಂಬರ್ಸ್ ವಹಿಸಿದ್ದರು.
ಸಭೆಯಲ್ಲಿ, ಪ್ರಧಾನಿ ಮೋದಿ ಅವರು ಭಾರತೀಯ ಆರ್ಥಿಕತೆಯ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಿಯೋಗವನ್ನು ಶ್ಲಾಘಿಸಿದರು. ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯು ಭಾರತದಲ್ಲಿ ವೇಗವಾಗಿ ವಿಕಸನಗೊಳ್ಳುತ್ತಿದೆ ಎಂಬ ಅಂಶವನ್ನು ಅವರು ಒತ್ತಿ ಹೇಳಿದರು ಮತ್ತು ದೇಶದ ಯುವಜನರು ಉದ್ಯಮಶೀಲತೆಯ ಅಪಾಯವನ್ನು ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಉಲ್ಲೇಖಿಸಿದರು. ಅಟಲ್ ಥಿಂಕರಿಂಗ್ ಲ್ಯಾಬ್ಗಳು, ನಾವೀನ್ಯತೆ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ತಂತ್ರಜ್ಞಾನದ ಬಳಕೆಯಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಹ್ಯಾಕಥಾನ್ಗಳನ್ನು ನಡೆಸುವುದು ಸೇರಿದಂತೆ ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪ್ರಧಾನಿ ವಿವರಿಸಿದರು.
ಕಾರ್ಪೊರೇಟ್ ತೆರಿಗೆ ಕಡಿತ ಮತ್ತು ಕಾರ್ಮಿಕ ಸುಧಾರಣೆಗಳನ್ನು ತರುವ ಮೂಲಕ ಉದ್ಯಮವನ್ನು ಸುಲಲಿತಗೊಳಿಸಲು ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮೋದಿ ಮಾತನಾಡಿದರು. ತಮ್ಮ ಸರ್ಕಾರವು ಸುಲಲಿತ ಜೀವನವನ್ನು ಖಾತರಿಪಡಿಸುವತ್ತ ಗಮನ ಹರಿಸಿದೆ ಎಂದು ಅವರು ಒತ್ತಿ ಹೇಳಿದರು. ಪ್ರಜಾಪ್ರಭುತ್ವ, ಜನಸಂಖ್ಯೆ ಮತ್ತು ಬುದ್ಧಿ ಈ ಮೂರು ಭಾರತದ ವಿಶಿಷ್ಟ ಶಕ್ತಿ ಎಂದು ಪ್ರಧಾನಿ ಬಣ್ಣಿಸಿದರು.
ಯುಎಸ್ಐಎಸ್ಪಿಎಫ್ ನಿಯೋಗವು ಪ್ರಧಾನಿ ಮೋದಿಯವರು ದೇಶದ ಬಗ್ಗೆ ಹೊಂದಿರುವ ದೃಷ್ಟಿಕೋನದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿದೆ ಮತ್ತು ಭಾರತದ ಮುಂದಿನ ಐದು ವರ್ಷಗಳು ಜಗತ್ತಿನ ಮುಂದಿನ ಇಪ್ಪತ್ತೈದು ವರ್ಷಗಳನ್ನು ವ್ಯಾಖ್ಯಾನಿಸುತ್ತದೆ ಎಂದು ಅದು ವಿಶ್ಲೇಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.