ವಾರಣಾಸಿ: ಕಾಶಿ ವಿಶ್ವನಾಥ ದೇವಾಲಯದ ವೈಭವವನ್ನು ಪುನಃಸ್ಥಾಪಿಸಲು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಹಮ್ಮಿಕೊಂಡಿರುವ ಹಲವು ಪ್ರಮುಖ ಯೋಜನೆಗಳ ಕಾಮಗಾರಿಗಳು ಭರದಿಂದ ಸಾಗುತ್ತಿದೆ.
ಮಹತ್ವದ ಯೋಜನೆಗಳ ಪೈಕಿ ಕಾಶಿ ವಿಶ್ವನಾಥ ಕಾರಿಡಾರ್ ಒಂದಾಗಿದ್ದು, ಇದರ ವಿಸ್ತೃತ ಯೋಜನಾ ವರದಿ (ಡಿಪಿಆರ್) ಈಗಾಗಲೇ ಅನುಮೋದನೆಯನ್ನು ಪಡೆದುಕೊಂಡಿದೆ, ಸಂಬಂಧಪಟ್ಟ ಅಧಿಕಾರಿಗಳು ಧನ ತ್ರಯೋದಶಿ (ಧನ್ತೇರಸ್)ನ ಪುಣ್ಯ ದಿನದಂದು ಕಾರಿಡಾರ್ ನಿರ್ಮಾಣ ಕಾರ್ಯಕ್ಕಾಗಿ ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
“ಧನ್ತೇರಸ್ನಲ್ಲಿ, ಪಿಡಬ್ಲ್ಯುಡಿ (ಲೋಕೋಪಯೋಗಿ ಇಲಾಖೆ) ಆನ್ಲೈನ್ನಲ್ಲಿ ಜಾಗತಿಕ ಟೆಂಡರ್ ಅನ್ನು ಕರೆಯಲಿದೆ. ಅರ್ಹತೆ ಹೊಂದಿರುವ ಜಾಗತಿಕ ಸಂಸ್ಥೆಗಳು ಇದಕ್ಕಾಗಿ ಬಿಡ್ ಮಾಡಬಹುದು. ಯೋಜನೆಯ ವೆಚ್ಚ 100 ಕೋಟಿ ರೂ.ಗಳಿಗಿಂತ ಹೆಚ್ಚಿರುವುದರಿಂದ, ಜಾಗತಿಕ ಸಂಸ್ಥೆಗಳಿಗೆ ಬಿಡ್ ಮಾಡಲು ಕನಿಷ್ಠ 30 ದಿನಗಳ ಸಮಯವನ್ನು ನೀಡಲಾಗುವುದು” ಎಂದು ಕಾಶಿ ವಿಶ್ವನಾಥ್ ಕಾರಿಡಾರ್ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶಾಲ್ ಸಿಂಗ್ ಹೇಳಿದ್ದಾರೆ.
ಕಾಶಿ ವಿಶ್ವನಾಥ ದೇವಾಲಯವು ತೀರ್ಥಯಾತ್ರೆಯ ಪ್ರಮುಖ ಕ್ಷೇತ್ರವಾಗಿದ್ದು, ಪ್ರತಿವರ್ಷ ವಾರಣಾಸಿ ನಗರಕ್ಕೆ ಲಕ್ಷಾಂತರ ಯಾತ್ರಾರ್ಥಿಗಳು ಆಗಮಿಸುತ್ತಾರೆ. ಇದು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ ಮತ್ತು ಏಳು ಪುರಿಗಳಲ್ಲಿ ಒಂದಾಗಿದೆ. ಹೀಗಾಗಿ ಭಕ್ತರು ಇದಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ.
ಆದರೂ ಕಾಶಿಯಲ್ಲಿ, ಕಿರಿದಾದ ರಸ್ತೆಗಳು ಮತ್ತು ಸಂಕೀರ್ಣವಾದ ವಸತಿ ಪ್ರದೇಶಗಳಿವೆ. ಭಕ್ತರು ಇಲ್ಲಿ ತುಂಬಿ ಹೋಗುವುದರಿಂದ ನಿಬಿಡತೆ ಹೆಚ್ಚಾಗುತ್ತದೆ. ಹೀಗಾಗಿ ಎಲ್ಲಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ದೇವಾಲಯದ ಮತ್ತು ನಗರದ ಸಾಮರ್ಥ್ಯವನ್ನು ಹೆಚ್ಚಿಸಲು ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.