ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ಏಕ ಸಹಾಯವಾಣಿ ಸಂಖ್ಯೆ, ತುರ್ತು ಸ್ಪಂದನಾ ಬೆಂಬಲ ವ್ಯವಸ್ಥೆ (Emergency Response Support System (ERSS) ) -112ಗೆ ಚಾಲನೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ, ಹಿರಿಯ ನಾಗರಿಕರ ಸುರಕ್ಷತಾ ಉಪಕ್ರಮ ‘ಸವೆರಾ’ ಅನ್ನು ಸಹ ಪ್ರಾರಂಭಿಸಲಾಗಿದೆ.
“ಏಕ ಸಹಾಯವಾಣಿ ಸಂಖ್ಯೆಯು ಸ್ಪಂದನಾ ಸಮಯವನ್ನು ಕಡಿಮೆ ಮಾಡಲಿದೆ. 112 ರ ರೂಟ್ ಚಾರ್ಟ್ ಸಿದ್ಧಪಡಿಸಲಿದ್ದೇವೆ ಮತ್ತು ಎಲ್ಲಾ ಜಿಲ್ಲೆಗಳಲ್ಲಿ, ನಿಲ್ದಾಣ ಮಟ್ಟದಲ್ಲಿ ಇದನ್ನು ಕಾರ್ಯಾರಂಭ ಮಾಡಲಿದ್ದೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಆದಿತ್ಯನಾಥ್ ಅವರು, ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಪ್ರಯತ್ನವನ್ನು ಪೊಲೀಸರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.
ಪ್ರಯಾಗರಾಜ್ ಕುಂಭಮೇಳ ಮತ್ತು ವಾರಣಾಸಿಯಲ್ಲಿ 15 ನೇ ಪ್ರವಾಸಿ ಭಾರತೀಯ ದಿವಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಗ್ಗೆ ಅವರು ಪೊಲೀಸರನ್ನು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.