ನವದೆಹಲಿ: ಭಾರತದ ಏಕೀಕರಣದ ರೂವಾರಿ, ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 144ನೇ ಜನ್ಮದಿನವನ್ನು ಇಂದು ದೇಶದಾದ್ಯಂತ ‘ಏಕತಾ ದಿನ’ವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ನ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ಅಮಿತ್ ಶಾ ಅವರು ಕೂಡ ನವದೆಹಲಿಯಲ್ಲಿ ಸರ್ದಾರ್ ಪಟೇಲ್ ಅವರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ದೆಹಲಿಯ ಧ್ಯಾನ್ ಚಂದ್ ನ್ಯಾಷನಲ್ ಸ್ಟೇಡಿಯಂನಲ್ಲಿ ಶಾ ಅವರು ‘ಏಕತಾ ಓಟ’ಕ್ಕೆ ಚಾಲನೆಯನ್ನು ನೀಡಿದರು.
ಪಟೇಲರ 144ನೇ ಜನ್ಮದಿನವನ್ನು ದೇಶದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆಗೊಳಿಸುವ ಮೂಲಕ ಆಚರಣೆ ಮಾಡಲಾಗುತ್ತಿದೆ.
2014 ರಿಂದ, ಅಕ್ಟೋಬರ್ 31 ಅನ್ನು ರಾಷ್ಟ್ರೀಯ ಏಕತೆ ದಿನವಾಗಿ ಆಚರಿಸಲಾಗುತ್ತದೆ ಮತ್ತು ಎಲ್ಲಾ ವರ್ಗದ ಜನರು ‘ರನ್ ಫಾರ್ ಯೂನಿಟಿ’ಯಲ್ಲಿ ಭಾಗವಹಿಸಿ ‘ಏಕ ಭಾರತ, ಶ್ರೇಷ್ಠ ಭಾರತ’ದ ಸಂಕಲ್ಪ ಮಾಡುತ್ತಿದ್ದಾರೆ. ಕೆವಾಡಿಯಾದಲ್ಲಿನ ಏಕತಾ ಪ್ರತಿಮೆಯನ್ನು 2018 ರಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದರು.
“ಮಹಾನ್ ಸರ್ದಾರ್ ಪಟೇಲ್ ಅವರ ಜಯಂತಿಯಂದು ಅವರಿಗೆ ಗೌರವ. ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆ ಸ್ಮರಣೀಯ” ಎಂದು ಪ್ರಧಾನಿ ಇಂದು ಟ್ವೀಟ್ ಮಾಡಿದ್ದಾರೆ.
ಮೋದಿ ಅವರು ರಾಷ್ಟ್ರೀಯ ಏಕತೆ ದಿನದ ಮೆರವಣಿಗೆಯಲ್ಲಿ ಕೂಡ ಭಾಗವಹಿಸಿದ್ದರು. ತಂತ್ರಜ್ಞಾನ ಪ್ರದರ್ಶನ ತಾಣಕ್ಕೆ ಅವರ ಇಂದು ಭೇಟಿ ನೀಡಲಿದ್ದಾರೆ ಮತ್ತು ಕೆವಾಡಿಯಾದಲ್ಲಿ ಸಿವಿಲ್ ಸರ್ವಿಸ್ ಪ್ರೊಬೇಷನರ್ಗಳೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ.
देश की एकता के सूत्रधार लौह पुरुष सरदार वल्लभभाई पटेल को उनकी जन्म-जयंती पर शत-शत नमन।
Tributes to the great Sardar Patel on his Jayanti. His contribution to our nation is monumental. pic.twitter.com/DMS8rN9Jbp
— Narendra Modi (@narendramodi) October 31, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.