ಶ್ರೀನಗರ: ಜಮ್ಮು ಮತ್ತು ಕಾಶ್ಮೀರ, ಲಡಾಖ್ ಇಂದಿನಿಂದ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ತಿತ್ವಕ್ಕೆ ಬಂದಿವೆ. ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಮೂರು ತಿಂಗಳ ತರುವಾಯ ಎರಡೂ ಕೇಂದ್ರಾಡಳಿತ ಪ್ರದೇಶಗಳು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನ ಸಭೆ ಇರುವ ಕೇಂದ್ರಾಡಳಿತ ಪ್ರದೇಶವಾಗಿದೆ, ಲಡಾಖ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿದೆ.
ಭಾರತದ ಏಕೀಕರಣದ ರೂವಾರಿಯಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವಾದ ಇಂದು ‘ಏಕತಾ ದಿನ’ವನ್ನು ಆಚರಣೆ ಮಾಡಲಾಗುತ್ತಿದೆ. ಇಂದೇ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸಂಪೂರ್ಣವಾಗಿ ಭಾರತದೊಂದಿಗೆ ಏಕೀಕರಣಗೊಂಡಿದೆ, ಇದು ಲೋಹಪುರುಷನಿಗೆ ಸಿಕ್ಕ ಗೌರವವೂ ಹೌದು.
ಕೇಂದ್ರ ಆವವ್ಯಯ ಕಾರ್ಯದರ್ಶಿ ಗಿರೀಶ್ ಚಂದ್ರ ಮುರ್ಮು ಅವರು ಇಂದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ರಕ್ಷಣಾ ಕಾರ್ಯದರ್ಶಿ ರಾಧಾ ಕೃಷ್ಣ ಮಾಥುರ್ ಅವರು ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಆಗಿ ಇಂದು ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು.
ಕೇಂದ್ರವು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆಯನ್ನು ನೇರವಾಗಿ ನಿಯಂತ್ರಣಕ್ಕೆ ತೆಗೆದುಕೊಳ್ಳಲಿದೆ, ಆದರೆ ಭೂಮಿಯ ಮೇಲಿನ ನಿರ್ಧಾರಗಳು ಚುನಾಯಿತ ಸರ್ಕಾರದ ಅಧಿಕಾರ ವ್ಯಾಪ್ತಿಯಲ್ಲಿ ಇರುತ್ತದೆ. ಲಡಾಖ್ ಕೇಂದ್ರ ಸರ್ಕಾರದ ನೇರ ನಿಯಂತ್ರಣದಲ್ಲಿರಲಿದ್ದು, ಅದನ್ನು ಲೆಫ್ಟಿನೆಂಟ್ ಗವರ್ನರ್ ಮೂಲಕ ನಿರ್ವಹಣೆ ಮಾಡಲಾಗುತ್ತದೆ.
ಅಭಿವೃದ್ಧಿಯಿಂದ ಇದುವರೆಗೆ ವಂಚಿತಗೊಂಡಿದ್ದ ಈ ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನು ಮುಂದೆ ಅಭಿವೃದ್ಧಿ ಹೊಸ ಪರ್ವ ಆರಂಭಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.