ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಜ್ಯೋತ್ಸವದ ಹಿನ್ನಲೆಯಲ್ಲಿ ಕನ್ನಡ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ರಾಷ್ಟ್ರಪತಿ ಕೋವಿಂದ್ ಅವರು ಕನ್ನಡದಲ್ಲೇ ಟ್ವಿಟ್ ಮಾಡಿ, “ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ” ಎಂದು ಹಾರೈಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.
— President of India (@rashtrapatibhvn) ನವೆಂಬರ್ 1, 2019
“ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಕನ್ನಡದಲ್ಲೇ ಟ್ವಿಟ್ ಮಾಡಿದ್ದಾರೆ.
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.