ನವದೆಹಲಿ: ಅಯೋಧ್ಯಾ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ಅಂತಿಮ ತೀರ್ಪನ್ನು ನೀಡಲಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಅಪಾರ ಪ್ರಮಾಣದ ಭದ್ರತಾ ಪಡೆಗಳನ್ನು ನಿಯೋಜನೆಗೊಳಿಸಲಾಗಿದೆ.
ಮಧ್ಯಪ್ರದೇಶ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ ಮತ್ತು ದೆಹಲಿಯಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ಉತ್ತರಪ್ರದೇಶದಲ್ಲಿ ಶನಿವಾರದಿಂದ ಸೋಮವಾರದವರೆಗೆ ಎಲ್ಲಾ ಶಾಲೆಗಳು, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದೆ. ಕರ್ನಾಟಕ, ಜಮ್ಮು-ಕಾಶ್ಮೀರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಶಾಲೆಗಳು ಮತ್ತು ಕಾಲೇಜುಗಳು ಸಹ ಇಂದು ಮುಚ್ಚಲ್ಪಟ್ಟಿವೆ. ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ದೆಹಲಿಯಲ್ಲಿಯೂ ಸಹ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಅನೇಕ ಖಾಸಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಗೋವಾ, ಉತ್ತರ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸುವ ಸಿಆರ್ಪಿಸಿಯ ಸೆಕ್ಷನ್ 144 ಅನ್ನು ಹಾಕಲಾಗಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆ 7 ರಿಂದ 12 ರವರೆಗೆ ಸೆಕ್ಷನ್ 144 ಸಿಆರ್ಪಿಸಿ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ, ಜಮ್ಮು ಮತ್ತು ಕಾಶ್ಮೀರ ಆಡಳಿತವೂ ಪರೀಕ್ಷೆಗಳನ್ನು ಮುಂದೂಡಿದೆ ಮತ್ತು ಶನಿವಾರ ಶುಷ್ಕ ದಿನವೆಂದು ಘೋಷಿಸಿದೆ ಅಂದರೆ ಮದ್ಯ ಮಾರಾಟ ನಡೆಯುವುದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.