ಅಯೋಧ್ಯಾ: ಶ್ರೀರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ತೀರ್ಪು ಪ್ರಕಟವಾದ ಬಳಿಕ ಮೊದಲ ಬಾರಿಗೆ ಶನಿವಾರ ರಾತ್ರಿ ಸರಯೂ ನದಿ ತೀರದಲ್ಲಿ ಆರತಿಯನ್ನು ನೆರವೇರಿಸಲಾಯಿತು.
ಸೂರ್ಯಾಸ್ತವಾಗುತ್ತಿದ್ದಂತೆ ದೇಗುಲದ ಅರ್ಚಕರು ಅತ್ಯಂತ ಭಕ್ತಿಪೂರ್ವಕವಾಗಿ ಆರತಿಯನ್ನು ನೆರವೇರಿಸಿದರು. ನೂರಾರು ಭಕ್ತಾದಿಗಳು ಇದರಲ್ಲಿ ಪಾಲ್ಗೊಂಡು ಮಂತ್ರ ಪಠಣ ಮಾಡಿದರು.
ಶನಿವಾರ ಸುಪ್ರೀಂಕೋರ್ಟ್ ಅಯೋಧ್ಯಾ ವಿವಾದದ ಬಗ್ಗೆ ಐತಿಹಾಸಿಕ ತೀರ್ಪನ್ನು ನೀಡಿ, ವಿವಾದಾತ್ಮಕ ಭೂಮಿಯನ್ನು ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಹಸ್ತಾಂತರಿಸಬೇಕೆಂದು ಆದೇಶಿಸಿದೆ. ಅಲ್ಲದೆ ಕೇಂದ್ರ ಸರಕಾರಕ್ಕೆ ಸಮಿತಿಯೊಂದನ್ನು ರಚನೆ ಮಾಡಿ ರಾಮಮಂದಿರ ನಿರ್ಮಾಣದ ಕಾರ್ಯವನ್ನು 3ತಿಂಗಳೊಳಗೆ ಆರಂಭಿಸುವಂತೆ ಸೂಚನೆ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯಿ, ನ್ಯಾಯಮೂರ್ತಿ ಎಸ್. ಎ. ಬೊಬ್ಡೆ, ಡಿ. ವೈ. ಚಂದ್ರಚೂಡ, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ಲಾ ನಝೀರ್ ನೇತೃತ್ವದ ನ್ಯಾಯಪೀಠವು ತೀರ್ಪನ್ನು ಪ್ರಕಟಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.