ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2024ರ ವೇಳೆಗೆ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ನಿಗದಿಪಡಿಸಿದ್ದಾರೆ. ಆದರೆ ಭಾರತವು ಹೊಂದಿರುವ ಪ್ರತಿಭೆಯನ್ನು ಗಮನಿಸಿದರೆ ನಾವು ಮುಂದಿನ 10-15 ವರ್ಷಗಳಲ್ಲಿ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
“ಪ್ರಧಾನಿ ಮೋದಿ 2024 ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದು ಗುರಿಯನ್ನು ನಿಗದಿಪಡಿಸಿದ್ದಾರೆ. ಆದರೆ ನಮ್ಮಲ್ಲಿರುವ ಪ್ರತಿಭೆಯೊಂದಿಗೆ 10-15 ವರ್ಷಗಳಲ್ಲಿ ನಾವು ಅದನ್ನು 10 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುತ್ತೇವೆ ಎಂದು ನಾನು ಭಾವಿಸುತ್ತೇನೆ” ಎಂದು ಸಿಂಗ್ ನವದೆಹಲಿಯಲ್ಲಿ ನಡೆದ ‘Def-Connect’ ಕಾರ್ಯಕ್ರಮದಲ್ಲಿ ಹೇಳಿದರು. ಕಳೆದ ತಿಂಗಳು ಸಿಂಗ್ ಅವರು, 2025 ರ ವೇಳೆಗೆ ಭಾರತೀಯ ರಕ್ಷಣಾ ಉದ್ಯಮವನ್ನು 26 ಬಿಲಿಯನ್ ಮೌಲ್ಯಕ್ಕೇರಿಸುವ ಸರ್ಕಾರದ ಗುರಿಯನ್ನು ಸಾಧಿಸಲು ರಕ್ಷಣಾ ಉತ್ಪಾದನೆಯಲ್ಲಿ ಖಾಸಗಿ ವಲಯವು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಿಂಗ್ ಕರೆ ನೀಡಿದ್ದರು.
“ಸಮಗ್ರ ಬೆಳವಣಿಗೆಯನ್ನು ಸಾಧಿಸಲು ಮತ್ತು ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಸರ್ಕಾರದ ಗುರಿಯಲ್ಲಿ ರಕ್ಷಣಾ ಕ್ಷೇತ್ರವು ಪ್ರಮುಖ ಪಾತ್ರ ವಹಿಸುತ್ತದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.