ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಸಮೀಪ ಅಕ್ಟೋಬರ್ ತಿಂಗಳಲ್ಲಿ ಪಾಕಿಸ್ಥಾನವು ನಡೆಸಿದ ಕದನ ವಿರಾಮ ಉಲ್ಲಂಘನೆಯು 2019ರ ಹತ್ತು ತಿಂಗಳುಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ಸೇನೆಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ನವೆಂಬರ್ ತಿಂಗಳ ಮೊದಲ 11 ದಿನಗಳಲ್ಲಿ ಪಾಕಿಸ್ಥಾನವು ಸುಮಾರು 97 ಕದನ ವಿರಾಮ ಉಲ್ಲಂಘನೆಗಳನ್ನು ನಡೆಸಿದ ಬಗ್ಗೆ ವರದಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆಯು ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಅಕ್ಟೋಬರ್ನಲ್ಲಿ ಜಮ್ಮು ಕಾಶ್ಮೀರದ ವಿವಿಧ ವಲಯಗಳಲ್ಲಿನ ಎಲ್ಒಸಿ ಉದ್ದಕ್ಕೂ ಪಾಕಿಸ್ಥಾನವು 351 ಕದನ ವಿರಾಮ ಉಲ್ಲಂಘನೆಗಳನ್ನು ನಡೆಸಿದೆ. ಆಗಸ್ಟ್ ತಿಂಗಳಲ್ಲೂ ಪಾಕಿಸ್ಥಾನದ ಕಡೆಯಿಂದ ಕದನ ವಿರಾಮ ಉಲ್ಲಂಘನೆಯು 300 ಅಂಕಿಗಳನ್ನು ದಾಟಿದೆ. ಈ ತಿಂಗಳು ಭಾರತದ ಸಂಸತ್ತು 370 ನೇ ವಿಧಿಯನ್ನು ರದ್ದುಗೊಳಿಸಿತ್ತು. ಆಗಸ್ಟ್ ತಿಂಗಳಲ್ಲಿ ನಡೆದ ಕದನ ವಿರಾಮ ಉಲ್ಲಂಘನೆಯ ಒಟ್ಟು ಸಂಖ್ಯೆ 307 ಎಂದು ಹೇಳಲಾಗಿದೆ.
“ಆಗಸ್ಟ್ 5ರಂದು 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಕದನ ವಿರಾಮ ಉಲ್ಲಂಘನೆಯು ಹಲವಾರು ಪಟ್ಟು ಹೆಚ್ಚಾಗಿದೆ. ಪಾಕಿಸ್ಥಾನವು ಎಲ್ಒಸಿ ಮೂಲಕ ಒಳನುಸುಳುಕೋರರನ್ನು ಭಾರತದೊಳಗೆ ನುಸುಳಿಸಲು ಪ್ರಯತ್ನಿಸುತ್ತಿದೆ ಎಂಬ ಅಂಶವನ್ನು ಇದು ಸೂಚಿಸುತ್ತದೆ. ಹಲವಾರು ಒಳನುಸುಳುವಿಕೆ ಪ್ರಯತ್ನಗಳನ್ನು ಭಾರತೀಯ ಯೋಧರು ತಮ್ಮ ಗುಂಡಿನ ಮೂಲಕ ವಿಫಲವಾಗಿಸಿದ್ದಾರೆ” ಎಂದು ಸೇನೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನವೆಂಬರ್ 8-9ರ ಮಧ್ಯರಾತ್ರಿಯಲ್ಲಿ, ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್ನ ಮುಂಭಾಗದ ಸ್ಥಳದಲ್ಲಿ 6 ನುಸುಳುಕೋರರು ಭಾರತದ ಯೋಧರ ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದರು. ಪಾಕಿಸ್ಥಾನದ ಪಡೆಗಳು ಸಣ್ಣ ಶಸ್ತ್ರಾಸ್ತ್ರ ಮತ್ತು ಮೋರ್ಟಾರ್ ಅನ್ನು ಬಳಸಿ ದಾಳಿಯನ್ನು ನಡೆಸಿದ್ದರು. ಈ ದಾಳಿಯಲ್ಲಿ ಒಬ್ಬ ಭಾರತೀಯ ಸೈನಿಕ ಹುತಾತ್ಮರಾಗಿದ್ದರು, ಆದರೂ ಭಾರತದ ಯೋಧರ ದಿಟ್ಟ ಹೋರಾಟದಿಂದಾಗಿ ಒಳನುಸುಳುಕೋರರು ಹಿಮ್ಮೆಟ್ಟಬೇಕಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.