ನವದೆಹಲಿ: ಕೇಂದ್ರ ಸರ್ಕಾರವು ಗ್ರಾಮೀಣಾಭಿವೃದ್ಧಿಗೆ ಬದ್ಧವಾಗಿದೆ ಮತ್ತು ರೈತರ ಉನ್ನತಿಯನ್ನು ಆದ್ಯತೆಯ ಪಟ್ಟಿಯಲ್ಲಿ ಇರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.
“ನಮ್ಮ ಸರ್ಕಾರವು ಆಹಾರ ಅಭಿವೃದ್ಧಿ, ರಾಷ್ಟ್ರೀಯ ಭದ್ರತೆ ಮತ್ತು ರೈತರ ವಿಷಯಗಳನ್ನು ಆದ್ಯತೆಯ ಪಟ್ಟಿಯಲ್ಲಿ ಇರಿಸಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ರೈತರ ಬಗ್ಗೆ ನಾವು ಸಾಕಷ್ಟು ಕಾಳಜಿ ಹೊಂದಿದ್ದೇವೆ. ನೀರಿನ ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ವೃದ್ಧಿಗೂ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದೇವೆ” ಎಂದು ಆರನೇ ವರ್ಲ್ಡ್ ಕಾಂಗ್ರೆಸ್ ಆನ್ ರೂರಲ್ ಆ್ಯಂಡ್ ಅಗ್ರಿಕಲ್ಚರ್ ಫಿನಾನ್ಸ್ ಕಾರ್ಯಕ್ರಮದಲ್ಲಿ ಸೀತಾರಾಮನ್ ಹೇಳಿದರು.
ರೈತರಿಗೆ ಹೆಚ್ಚುವರಿ ಆದಾಯದ ಮೂಲವನ್ನು ಒದಗಿಸುವ ಸಲುವಾಗಿ ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳನ್ನು ಉತ್ತೇಜಿಸುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
“ಅನ್ನದಾತಾ ಸದಾ ಸಂತುಷ್ಟನಾಗಿರಬೇಕು ಎಂದು ನಾನು ಬಯಸುತ್ತೇನೆ. ನಾವು ಸೌರ ಫಲಕಗಳು, ಟರ್ಬೈನ್ಗಳು ಇತ್ಯಾದಿಗಳನ್ನು ಸ್ಥಾಪಿಸುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ, ಇದರಿಂದಾಗಿ ರೈತರು ತಮ್ಮ ಬೆಳೆ ಬೆಳೆಯಲಾಗದ ಬಂಜರು ಭೂಮಿಯಲ್ಲಿ ವಿದ್ಯುತ್ ಉತ್ಪಾದಿಸಬಹುದು” ಎಂದು ಅವರು ಹೇಳಿದ್ದಾರೆ.
ಕೃಷಿಕರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಪಡೆಯಲು 10,000 ರೈತರು ಉತ್ಪಾದನಾ ಸಂಸ್ಥೆಗಳನ್ನು ರಚಿಸಲಾಗುವುದು ಮತ್ತು ಸರ್ಕಾರದಿಂದ ಸಾಲ ಮತ್ತು ಇತರ ಸಹಾಯವನ್ನು ಅವರಿಗೆ ವಿಸ್ತರಿಸಲಾಗುವುದು ಎಂದು ಸೀತಾರಾಮನ್ ಘೋಷಿಸಿದರು.
ಕೇಂದ್ರವು ರಾಷ್ಟ್ರೀಯ ಕೃಷಿ ಮಾರುಕಟ್ಟೆ (ಇಎನ್ಎಎಂ)ಗೆ ಉತ್ತೇಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.