ನವದೆಹಲಿ: ಕರ್ನಾಟಕದ 17 ಮಂದಿ ಅನರ್ಹ ಶಾಸಕರಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಗೊಳಿಸಿದೆ. ಅನರ್ಹರಿಗೆ ದೊಡ್ಡ ಮಟ್ಟದ ನಿರಾಳತೆಯನ್ನು ತೀರ್ಪು ನೀಡಿದ್ದು, ಉಪಚುನಾವಣೆಗೆ ಸ್ಪರ್ಧಿಸುವುದಕ್ಕೆ ಅವರಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದೆ.
ಸುಪ್ರೀಂಕೋರ್ಟ್ ಸ್ಪೀಕರ್ ಅವರ ಆದೇಶವನ್ನು ಎತ್ತಿ ಹಿಡಿದಿದೆ, ಅನರ್ಹರು ಅನರ್ಹ ಶಾಸಕರಾಗಿಯೇ ಮುಂದುವರೆಯಲಿದ್ದಾರೆ, ಆದರೆ ಅವರು ಉಪಚುನಾವಣೆಗೆ ಸ್ಪರ್ಧಿಸಬಹುದಾಗಿದೆ.
“ಪಕ್ಷಾಂತರವನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ, ಹೀಗಾಗಿ 17 ಮಂದಿ ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ಅವರ ನಿರ್ಧಾರ ಸರಿಯಾದುದಾಗಿದೆ. ಆದರೆ 2023ರವರೆಗೆ ಅಂದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ್ದು ಸಮಂಜಸವಲ್ಲ. ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದಾಗಿದೆ. ಆದರೆ ಮರು ಚುನಾವಣೆಯಲ್ಲಿ ಗೆಲ್ಲುವವರೆಗೂ ಅನರ್ಹರು ಸರ್ಕಾರದಲ್ಲಿ ಸಚಿವ ಸ್ಥಾನ ಸೇರಿದಂತೆ ಯಾವುದೇ ಹುದ್ದೆಯನ್ನೂ ಅಲಂಕರಿಸುವಂತೆ ಇಲ್ಲ” ಎಂದು ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಉಲ್ಲೇಖ ಮಾಡಿದೆ.
ಈ ಮೂಲಕ ಚುನಾವಣೆಯಲ್ಲಿ ಗೆಲ್ಲುವವರೆಗೂ ಅನರ್ಹತೆ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.