ಮುಂಬಯಿ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ರಾಜಕಾರಣದ ಚಾಣಾಕ್ಯ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದಿದ್ದಾರೆ.
ಟ್ವೀಟ್ ಮಾಡಿರುವ ಸುಶೀಲ್ ಮೋದಿ ಅವರು, “ಅಮಿತ್ ಶಾ ತಾವು ಭಾರತೀಯ ರಾಜಕಾರಣದ ಚಾಣಕ್ಯ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ” ಎಂದಿದ್ದಾರೆ.
ಆಶ್ಚರ್ಯಕರ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಎರಡನೇ ಬಾರಿಗೆ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಎನ್ಸಿಪಿ ಪಕ್ಷದ ಅಜಿತ್ ಪವಾರ್ ಅವರು ನೇಮಕವಾಗಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಇವರಿಗೆ ಪ್ರಮಾಣವಚನವನ್ನು ಬೋಧಿಸಿದ್ದಾರೆ.
ಬಿಜೆಪಿಯೊಂದಿಗಿನ ಮೈತ್ರಿ ಕಳೆದುಕೊಂಡು ಇತರ ಪಕ್ಷಗಳ ಜೊತೆಗೂಡಿ ಸರಕಾರ ರಚಿಸಲು ಹವಣಿಸುತ್ತಿದ್ದ ಶಿವಸೇನೆಗೆ ಈ ಬೆಳವಣಿಗೆಯಿಂದ ತೀವ್ರ ಮುಖಭಂಗವಾಗಿದೆ. ಇನ್ನು ಅದಕ್ಕೆ ಪ್ರತಿಪಕ್ಷದಲ್ಲಿ ಕುಳಿತುಕೊಳ್ಳುವುದು ಒಂದೇ ಕುಳಿತುಕೊಳ್ಳುವುದೊಂದೇ ಆಯ್ಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.