ಗುವಾಹಟಿ: ಈಶಾನ್ಯ ರಾಜ್ಯಗಳಲ್ಲಿ ಭದ್ರತಾ ಕ್ರಮಗಳು ಸುಧಾರಿಸಿದ ಹಿನ್ನಲೆಯಲ್ಲಿ ಕೇಂದ್ರೀಯ ಪಡೆಗಳ ನಿಯೋಜನೆಯನ್ನು ಕಡಿಮೆಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಶನಿವಾರ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದರು.
‘ಭದ್ರತಾ ಪರಿಸ್ಥಿತಿ ಸುಧಾರಿಸಿರುವ ಹಿನ್ನಲೆಯಲ್ಲಿ ಕೇಂದ್ರೀಯ ಪಡೆಗಳ ನಿಯೋಜನೆ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕಾಗಿದೆ. ಈಶಾನ್ಯ ಭಾಗದಲ್ಲಿ ಬಂಡಾಯ ಅತಿಹೆಚ್ಚು ಇದ್ದ ಸಂದರ್ಭಕ್ಕಿಂತಲೂ ಈಗ ಹೆಚ್ಚಿನ ಭದ್ರತಾ ಪಡೆಗಳಿವೆ. ಪ್ರಸ್ತುತ ರಾಜ್ಯ ಭದ್ರತಾ ಪಡೆಗಳನ್ನು ಬಲಿಷ್ಠಗೊಳಿಸುವತ್ತ ಗಮನ ನೀಡಬೇಕಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಭದ್ರತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೆ ಭದ್ರತಾ ಪಡೆಗಳ ನಿಯೋಜನೆ ತಗ್ಗಿಸಬೇಕಾಗಿದೆ. ಈಶಾನ್ಯ ಭಾಗದ ಬಗ್ಗೆ ಇತರ ಭಾಗದ ಜನರಿಗೆ ಸಕಾರಾತ್ಮಕ ಭಾವನೆ ಮೂಡುವಂತೆ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.