ನವದೆಹಲಿ: 2012ರಲ್ಲಿ ದೆಹಲಿಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಕೊನೆ ಆರೋಪಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಶಿಫಾರಸ್ಸನ್ನು ಮಾಡಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಗೃಹ ಸಚಿವಾಲಯಕ್ಕೆ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ಅರ್ಜಿಯನ್ನು ಸಲ್ಲಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಲೆಫ್ಟಿನೆಂಟ್ ಗವರ್ನರ್ ಅವರು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಅರ್ಜಿಯನ್ನು ರಾಷ್ಟ್ರಪತಿಗಳ ಅಂತಿಮ ನಿರ್ಧಾರಕ್ಕೆ ಕಳುಹಿಸಿಕೊಡಲಾಗುತ್ತದೆ. ಇದೀಗ ಗೃಹಸಚಿವಾಲಯವು ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ತಿರಸ್ಕಾರ ಮಾಡುವಂತೆ ಶಿಫಾರಸ್ಸನ್ನು ಮಾಡಿದೆ.
ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ.
2012ರ ಡಿಸೆಂಬರ್ 16ರಂದು ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣ ನಡೆದಿತ್ತು. ಈ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ದೇಶವ್ಯಾಪಿಯಾಗಿ ಭಾರಿ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕು ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು.
ಇದೀಗ ಹೈದರಾಬಾದಿನಲ್ಲಿ ಪಶುವೈದ್ಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣ ಆರೋಪಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸುವ ಶಿಫಾರಸ್ಸನ್ನು ಕೇಂದ್ರ ಗೃಹ ಸಚಿವಾಲಯ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.