ವಡೋದರ: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಗೌರವಾರ್ಥ ಗುಜರಾತಿನ ನರ್ಮದಾ ನದಿ ತೀರದಲ್ಲಿ ನಿರ್ಮಾಣ ಮಾಡಲಾದ ಬೃಹತ್ ಏಕತಾ ಪ್ರತಿಮೆಯ ದಿನನಿತ್ಯ 15000 ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಈ ಮೂಲಕ 133 ವರ್ಷ ಇತಿಹಾಸವಿರುವ ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿ ಅನ್ನು ಇದು ಹಿಂದಿಕ್ಕಿದೆ.
‘2018 ರ ನವೆಂಬರ್ 1 ರಿಂದ 2019ರ ಅಕ್ಟೋಬರ್ 31ರವರೆಗೆ ಏಕತಾ ಪ್ರತಿಮೆಯ ಮೊದಲ ಆರಂಭಿಕ ವರ್ಷಕ್ಕಿಂತ ಈಗ ಪ್ರವಾಸಿಗರ ಸಂಖ್ಯೆಯಲ್ಲಿ ಶೇಕಡ 74 ರಷ್ಟು ಹೆಚ್ಚಳವಾಗಿದೆ. ನಿತ್ಯ 15 ಸಾವಿರಕ್ಕೂ ಅಧಿಕ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಅದರಲ್ಲೂ ವಾರಾಂತ್ಯಗಳಲ್ಲಿ ಪ್ರವಾಸಿಗರ ಸಂಖ್ಯೆ 22430ಕ್ಕೆ ಏರುತ್ತಿದೆ. ಆದರೆ ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿ ದಿನಕ್ಕೆ 10000 ಪ್ರವಾಸಿಗರನ್ನು ಪಡೆಯುತ್ತದೆ.
ಪ್ರತಿಷ್ಠಿತ ಟೈಮ್ ಮ್ಯಾಗಜೀನ್ ಏಕತಾ ಪ್ರತಿಮೆಯನ್ನು ವಿಶ್ವದ 100 ಅತಿ ಮುಖ್ಯ ಪ್ರವಾಸಿ ತಾಣಗಳಲ್ಲಿ ಒಂದನ್ನಾಗಿ ಪಟ್ಟಿ ಮಾಡಿದೆ.
ಕಳೆದ ವರ್ಷ ಅಕ್ಟೋಬರ್ 31ರಂದು 600 ಅಡಿ ಎತ್ತರದ ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಯನ್ನು ಗುಜರಾತಿನ ನರ್ಮದಾ ಜಿಲ್ಲೆಯಲ್ಲಿ ಸ್ಥಾಪನೆ ಮಾಡಲಾಯಿತು. ಇದು ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾಗಿದೆ. ಸ್ಟ್ಯಾಚು ಆಫ್ ಲಿಬರ್ಟಿಗಿಂತ ಇದು ಗಾತ್ರದಲ್ಲಿ ಎರಡು ಪಟ್ಟು ದೊಡ್ಡದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.