ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ನಡೆಯುತ್ತಿರುವ ಸೌತ್ ಏಷ್ಯನ್ ಗೇಮ್ಸ್ನ ಪದಕ ಪಟ್ಟಿಯಲ್ಲಿ ಭಾರತ ಪ್ರಾಬಲ್ಯವನ್ನು ಮೆರೆಯುತ್ತಿವೆ. ಇದುವರೆಗೆ ಭಾರತ ಒಟ್ಟು 252 ಪದಕಗಳನ್ನು ಗೆಲ್ಲುವ ಮೂಲಕ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಈಜುಗಾರರು ಮತ್ತು ಕುಸ್ತಿಪಟುಗಳು ಹೆಚ್ಚೆಚ್ಚು ಪದಕಗಳನ್ನು ಗೆಲ್ಲುತ್ತಿದ್ದಾರೆ.
ಇದುವರೆಗೆ ಭಾರತ 132 ಬಂಗಾರ, 79 ಬೆಳ್ಳಿ, 41 ಕಂಚಿನ ಪದಕಗಳನ್ನು ಜಯಿಸಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಪದಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ನೇಪಾಳ ಇದೆ. ಅದು 45 ಬಂಗಾರ, 44 ಬೆಳ್ಳಿ, 76 ಕಂಚಿನ ಪದಕಗಳ ಮೂಲಕ ಒಟ್ಟು 165 ಪದಕಗಳನ್ನು ಗೆದ್ದುಕೊಂಡಿದೆ. ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಶ್ರೀಲಂಕಾ ಇದೆ. ಇದು 35 ಬಂಗಾರ, 68 ಬೆಳ್ಳಿ, 93 ಕಂಚಿನ ಪದಕಗಳನ್ನು ಗೆದ್ದಿದೆ.
ಭಾನುವಾರ ನಡೆದ ಕ್ರೀಡಾಕೂಟದಲ್ಲಿ ಭಾರತದ ಈಜು ಪಟುಗಳು 9 ಬಂಗಾರ, ಎರಡು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಭಾರತೀಯ ಕುಸ್ತಿಪಟುಗಳು ಬಂಗಾರದ ಪದಕಗಳನ್ನು ಜಯಿಸಿದ್ದಾರೆ. ಭಾನುವಾರ ಸೌತ್ ಏಷ್ಯನ್ ಗೇಮ್ಸ್ನ 7ನೇ ದಿನವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.