ನವದೆಹಲಿ: ಪ್ರಗತಿ ಮತ್ತು ಅಭಿವೃದ್ಧಿಯತ್ತ ದಿಟ್ಟ ಹೆಜ್ಜೆಯನ್ನಿಟ್ಟಿರುವ ಕೇಂದ್ರ ಸರ್ಕಾರ ರೈತರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ 36000 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ ತಿಂಗಳಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಈ ಯೋಜನೆಯಡಿ ಕೇಂದ್ರ ಸರಕಾರ ಮೂರು ಕಂತುಗಳಲ್ಲಿ ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿಗಳನ್ನು ಒದಗಿಸುತ್ತದೆ. ಸುಮಾರು 14 ಕೋಟಿ ರೈತರಿಗೆ ಯೋಜನೆಯಿಂದ ಪ್ರಯೋಜನವಾಗುತ್ತಿದೆ.
ಈ ಬಗ್ಗೆ ಸಂಸತ್ತಿನಲ್ಲಿ ಮಾಹಿತಿಯನ್ನು ನೀಡಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, “ನವೆಂಬರ್ 30ರ ವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 7.6 ಕೋಟಿ ರೈತರಿಗೆ 36000 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದೆ” ಎಂದಿದ್ದಾರೆ.
ಇದು ನಿರಂತರ ಪ್ರಕ್ರಿಯೆಯಲ್ಲಿರುವ ಯೋಜನೆಯಾಗಿದ್ದು, ಫಲಾನುಭವಿ ರೈತರುಗಳ ಸಂಖ್ಯೆ ಏರುತ್ತಲೇ ಸಾಗುತ್ತದೆ. ಹೀಗಾಗಿ 2022ರ ವರೆಗೆ ಅಂದಾಜು ವ್ಯಯವನ್ನು ಸ್ಪಷ್ಟವಾಗಿ ಸಲ್ಲಿಸಲು ಸಾಧ್ಯವಾಗುವುದಿಲ್ಲ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಶೇಕಡ 100 ರಷ್ಟು ಕೇಂದ್ರದಿಂದಲೇ ಅನುದಾನವನ್ನು ಒದಗಿಸಲಾಗುತ್ತಿರುವ ಯೋಜನೆಯಾಗಿದೆ. ಯೋಜನೆ ಅಡಿಯಲ್ಲಿನ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾವಣೆ ಮಾಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.